ಚಿತ್ರದುರ್ಗ, (ಜೂನ್.22) : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಲೀಡ್ ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಐಕ್ಯೂಎಸಿ ಸಂಯುಕ್ತಾಶ್ರಯದಲ್ಲಿ ಜೂನ್ 23ರಂದು ಬೆಳಿಗ್ಗೆ 11.30ಕ್ಕೆ ನಗರದ ಸರ್ಕಾರಿ ಕಲಾ ಕಾಲೇಜು ಸಭಾಂಗಣದಲ್ಲಿ 2020-21ನೇ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣಾ ಮತ್ತು ಐಸಿಟಿ ಯುಕ್ತ ಸ್ಮಾರ್ಟ್ ತರಗತಿ ಕೊಠಡಿಗಳ ಸಾಂಕೇತಿಕ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು. ಪ್ರಾಂಶುಪಾಲರಾದ ಪ್ರೊ.ಟಿ.ಎಲ್.ಸುಧಾಕರ್, ಪ್ರೊ.ಆರ್.ಕೆ.ರಂಗಸ್ವಾಮಿ, ಡಾ.ಸಿ.ಚನ್ನಕೇಶವ ಹಾಗೂ ಐಟಿ ಮತ್ತು ಐಕ್ಯೂಎಸಿ ಸಂಚಾಲಕರು ಉಪಸ್ಥಿತರಿರುವರು.
Tags
Chitradurga
