ನವದೆಹಲಿ: ಭಾರತದ ಭೂ ಪಟವನ್ನು ತಪ್ಪಾಗಿ ಚಿತ್ರಿಸಿ ಟ್ವಿಟರ್ ನಲ್ಲಿ ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಟ್ವಿಟರ್ ಎಂ ಡಿ ಮನೀಶ್ ಮಹೇಶ್ವರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬಜರಂಗದಳದ ನಾಯಕರೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಜಮ್ಮು ಕಾಶ್ಮೀರ ಮತ್ತು ಲಡಾಕ್ ಪ್ರತ್ಯೇಕ ದೇಶಗಳು ಎಂದು ಟ್ವಿಟರ್ ತನ್ನ ನಕ್ಷೆಯಲ್ಲಿ ಪ್ರಕಟಿಸಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿರುವ ಟ್ವಿಟರ್ ಇದೀಗ ಪ್ರತಿ ದಿನ ಹೊಸ ಸಮಸ್ಯೆ ಸೃಷ್ಟಿಸುತ್ತಿದೆ.
