ಬೆಂಗಳೂರು: ಎಸ್ ಎಲ್ ಸಿ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಇಬ್ಬರು ಸಚಿವರ ನಡುವಿನ ಶೀತಲ ಸಮರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ತೆರೆ ಎಳೆದಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ನನ್ನ ಜತೆ ಚರ್ಚಿಸಿ ಶಿಕ್ಷಣ ಇಲಾಖೆ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಪ್ರಕಟಿಸಿದೆ ಎಂದು ಘೋಷಿಸಿದ್ದಾರೆ.
ಶಿಕ್ಷಣ ಇಲಾಖೆಯ ಸಚಿವರು ನನ್ನ ಜತೆ ಈ ಕುರಿತು ಚರ್ಚೆ ನಡೆಸಿಲ್ಲ. ನನಗೆ ಇದರ ಮಾಹಿತಿ ಇಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದರು.
ಇದು ಇಬ್ಬರು ಸಚಿವರ ನಡುವೆ ಶೀತಲ ಸಮರ ನಡೆಯುಯತ್ತಿದೆ ಎಂಬುದನ್ನು ಜಗಜ್ಜಾಹೀರು ಗೊಳಿಸಿತ್ತು.
ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಸಿಎಂ. ನನ್ನ ಜತೆ ಚರ್ಚಿಸಿ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಪ್ರಕಟಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
