ಸಿಯೋಲ್: ಮಾರಕ ಕೊರೋನಾ ವೈರಸ್ ಉತ್ತರ ಕೊರಿಯಾದ ತಡೆಗೋಡೆಯನ್ನು ಭೇದಿಸಿದೆ ಎಂದು ವರದಿಯಾಗಿದೆ. ಕೊರೋನಾ ಸೋಂಕು ಪತ್ತೆಯಾಗಿರುವುದನ್ನು ಉತ್ತರ ಕೊರಿಯಾ ಅಧಿಕೃತವಾಗಿ ದೃಢೀಕರಿಸಿಲ್ಲ. ವಿಶ್ವ ಆರೋಗ್ಯ ಸಂಸ್ಥೆಗೆ ಕೂಡ ಯಾವುದೇ ಮಾಹಿತಿ ನೀಡಿಲ್ಲ.
ಈ ಮಧ್ಯೆ ಕೊರೋನಾ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಗಂಭೀರ ಲೋಪ ಉಂಟಾಗಿದೆ ಎಂದು ವರದಿಯಾಗಿದೆ. ಹಲವು ಹಿರಿಯ ಅಧಿಕಾರಿಗಳನ್ನು ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಬದಲಾಯಿಸಿದ್ದಾರೆ.
ಕೊರೋನಾ ವೈರಸ್ ತಡೆಗಟ್ಟಲು ಉತ್ತರ ಕೊರಿಯಾ ಜನವರಿಯಿಂದಲೇ ತನ್ನ ಗಡಿಗಳನ್ನು ಮುಚ್ಚಿದೆ. ಯಾರಿಗೂ ದೇಶ ಪ್ರವೇಶಿಸಲು ಅನುಮತಿ ನೀಡಿಲ್ಲ.
Tags
World
