ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ತಡೆಗಟ್ಟುವ ಸಂಬಂಧ ಲಸಿಕೆ ಅಭಿಯಾನ ಇನ್ನಷ್ಟು ತೀವ್ರಗೊಳಿಸಲು ಬಿಬಿಎಂಪಿ ನಿರ್ಧರಿಸಿದೆ. ಇದರ ಭಾಗವಾಗಿ ಮನೆ ಮನೆಗೆ ತೆರಳಿ ಲಸಿಕೆ ನೀಡಲು ಪ್ಲಾನ್ ರೂಪಿಸಲಾಗಿದೆ. ಈ ಮೂಲಕ ಎಲ್ಲರೂ ಲಸಿಕೆ ಪಡೆದಿರುವುದನ್ನು ಖಾತರಿಪಡಿಸುವ ಯೋಜನೆಗೆ ಬಿಬಿಎಂಪಿ ಇದೀಗ ಅಂತಿಮ ರೂಪ ನೀಡುತ್ತಿದೆ.
ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಈ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಈ ವೇಳೆ ಇನ್ನಷ್ಟು ಮುನ್ನೆಚ್ಚರಿಕಾ ಕ್ರಮ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ದೇಶದ ನಗರಗಳ ಪೈಕಿ ಕೊರೋನಾ ಲಸಿಕೆ ಅಭಿಯಾನದಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ.
