ಚಳ್ಳಕೆರೆ ತಾಲೂಕು ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಡಿಹಳ್ಳಿಯಲ್ಲಿ ಮನೆ ಮನೆಗೂ ಮಾಸ್ಕ್ ಹಂಚಿಕೆ

ಗ್ರಾಪಂ ಅಧ್ಯಕ್ಷ ಮಲ್ಲೇಬೋರನಹಟ್ಟಿ ಶಂಕರಸ್ವಾಮಿ ನೇತೃತ್ವದಲ್ಲಿ ಜನರಲ್ಲಿ ಕೊರೋನಾ ಜಾಗೃತಿ ಮೂಡಿಸಿದ ಸದಸ್ಯರು

ನಾಯಕನಹಟ್ಟಿ: ಸಮೀಪದ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಡಿಹಳ್ಳಿಯಲ್ಲಿ ಮನೆ ಮನೆಗೂ ತೆರಳಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲೇಬೋರನಹಟ್ಟಿ ಬಿ. ಶಂಕರಸ್ವಾಮಿ ಸೇರಿ ಆಡಳಿತ ಮಂಡಳಿ ಸದಸ್ಯರು ಶುಕ್ರವಾರ ಮಾಸ್ಕ್ ಗಳನ್ನು ವಿತರಿಸಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಬಿ.ಶಂಕರಸ್ವಾಮಿ ಮಾತನಾಡಿ, ಸರ್ಕಾರ ಲಾಕ್ಡೌನ್ ಸಡಿಲಿಕೆ ಮಾಡಿದೆ ಎಂದು ಹೊರಗಡೆ ತಿರುಗಾಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಕೋವಿಡ್ ಮೂರನೇ ಅಲೆ ಬರುವ ಸಾಧ್ಯತೆಯನ್ನು ತಜ್ಞರು ಹೇಳಿರುವುದರಿಂದ ಎಚ್ವರಿಕೆಯಿಂದ ಇರಬೇಕು. ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ತಿಳಿಸಿದರು.

ಗ್ರಾಪಂ ಪಿಡಿಒ ಶಶಿಕಲಾ ಮಾತನಾಡಿ, ಮಕ್ಕಳ ಆರೋಗ್ಯ ಬಗ್ಗೆ ಪಾಲಕರು ಗಮನಹರಿಸಬೇಕು. ಕೊರೋನಾ ಸೋಂಕು ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಆದ್ದರಿಂದ ಜನರು ಮುಖಕ್ಕೆ ಮಾಸ್ಕ್ ಧರಿಸುವುದು, ಆಗಾಗ ಕೈಗಳನ್ನು ತೊಳೆದುಕೊಳ್ಳುವುದು ಸೇರಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕೆ.ಸಿ.ರಾಧಾ ರೇವಣ್ಣ, ಸದಸ್ಯೆ ಪಾಪಮ್ಮ ಸೇರಿ ಗ್ರಾಪಂ ಸಿಬ್ಬಂದಿ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ