ನವದೆಹಲಿ: ಜುಲೈ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ವಿಸ್ತರಿಸಲಾಗಿದೆ.
ಜೂನ್ 2020ರ ಜೂನ್ 6ರಂದು ಹೊರಡಿಸಲಾದ ಸುತ್ತೋಲೆಯನ್ನು ಮಾರ್ಪಡಿಸಿ ನಿಗದಿತ ಅಂತರಾಷ್ಟ್ರೀಯ ವಿಮಾನಗಳ ಸೇವೆಯನ್ನು ಬರುವ ಜುಲೈ 31ರವರೆಗೆ ಸ್ಥಗಿತಗೊಳಿಸಲಾಗಿದೆ. ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(ಡಿಜಿಸಿಎ) ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ನಿರ್ಬಂಧಗಳು ಸರಕು ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
