ಮನೆ ಗೋಡೆ ಬಿದ್ದು 7 ವರ್ಷದ ಬಾಲಕಿ ಸಾವು

ಕಲಬುರಗಿ: ಜಿಲ್ಲೆಯ ಹಲವೆಡೆ ರಾತ್ರಿ ಮಳೆ ಅಬ್ಬರ ಜೋರಾಗಿದ್ದು, ಭಾರೀ ಮಳೆಗೆ ಮನೆ ಗೋಡೆ ಬಿದ್ದು 7 ವರ್ಷದ ಬಾಲಕಿ ಸಾವನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಳೂಂಡಗಿ ಗ್ರಾಮದಲ್ಲಿ ನಡೆದಿದೆ.

ನೀಲಮ್ಮ ತಳವಾರ ಮೃತ ಬಾಲಕಿಯಾಗಿದ್ದು, ಎಂದಿನಂತೆ ಮನೆಯಲ್ಲಿ ತಮ್ಮ ಪೋಷಕರ ಜೊತೆ ಬಾಲಕಿ ಮಲಗಿದ್ದಳು. ಕಳೆದ ರಾತ್ರಿ ಒಂದು ಗಂಟೆ ಸಮಯದಲ್ಲಿ ಭಾರೀ ಮಳೆ ಮತ್ತು ಗಾಳಿ ಹಿನ್ನೆಲೆ ಮನೆ ಗೋಡೆ ಬಾಲಕಿ ಮೇಲೆ ಕುಸಿದಿದ್ದು, ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ.

ಅದೃಷ್ಠವಶಾತ್ ಬಾಲಕಿಯ ಪೋಷಕರು ಪಾರಾಗಿದ್ದಾರೆ. ಈ ಕುರಿತು ನೆಲೋಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ