ಬೆಂಗಳೂರು: ರಾಜ್ಯದಲ್ಲಿ ಇಂದು (ಜೂ.28) 2,576ಮಂದಿಗೆ ಸೋಂಕು ತಗುಲಿದ್ದು,93ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 2837,206ಕ್ಕೆ ಏರಿದ್ದು ಸಾವಿನ ಸಂಖ್ಯೆ 34,836ಕ್ಕೆ ತಲುಪಿದೆ.
ಇಂದು ರಾಜ್ಯದಲ್ಲಿ 5,933ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ ಕಡಿಮೆ 27,04,755ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 97,592ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 563ಪ್ರಕರಣ ದಾಖಲಾಗಿದ್ದು 18ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
