ಬೆಂಗಳೂರು: ರಾಜ್ಯದಲ್ಲಿ ಇಂದು (ಜೂ.29 3,222ಮಂದಿಗೆ ಸೋಂಕು ತಗುಲಿದ್ದು,93ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 28,40,428ಕ್ಕೆ ಏರಿದ್ದು ಸಾವಿನ ಸಂಖ್ಯೆ 34,929ಕ್ಕೆ ತಲುಪಿದೆ.
ಇಂದು ರಾಜ್ಯದಲ್ಲಿ 14,724ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ ಕಡಿಮೆ 27,19,479ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 85,997ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 753ಪ್ರಕರಣ ದಾಖಲಾಗಿದ್ದು 16ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
