ಮದ್ಯಪಾನ, ಬಾಲಕಾರ್ಮಿಕ ಪದ್ಧತಿ ವಿರುದ್ಧ ಹೋರಾಟ : ಡಯಾನಾ ಪ್ರಶಸ್ತಿ ಪಡೆದ 17ರ ಪೋರ

ಮಧ್ಯಪ್ರದೇಶ: ತನ್ನ ಗ್ರಾಮದಲ್ಲಿ ಮದ್ಯಪಾನ ಮತ್ತು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ವಿರುದ್ಧದ ಹೋರಾಟಕ್ಕಾಗಿ ಮಧ್ಯಪ್ರದೇಶದ ಸುರ್ಜೀತ್ ಲೋಧಿ (17) ಡಯಾನಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಸುರ್ಜೀತ್ ತಮ್ಮ 13ನೇ ವಯಸ್ಸಿನಲ್ಲಿ ತನ್ನ ಊರಿನಲ್ಲಿದ್ದ 5 ಮದ್ಯದಂಗಡಿಗಳನ್ನು ಮುಚ್ಚಿಸಿ, ಅನೇಕ ಮಕ್ಕಳನ್ನು ಬಾಲ ಕಾರ್ಮಿಕತೆಯಿಂದ ಹೊರತಂದು ಶಾಲೆಗೆ ತೆರಳುವಂತೆ ಮನವೊಲಿಸಿದ್ದರು.


ಇವರ ಈ ಕಾರ್ಯಕ್ಕೆ, ಡಯಾನಾ ಪ್ರಶಸ್ತಿ ನೀಡಲಾಗಿದೆ
ಈ ಪ್ರಶಸ್ತಿಯನ್ನು ದೇಶದ ಸುಸ್ಥಿರತೆಯ ಗುರಿ ಸಾಧಿಸುವ ಕಾರ್ಯ ಮಾಡಿದ ಸಾಧಕರಿಗೆ ನೀಡಲಾಗುತ್ತದೆ.
ಪ್ರಶಸ್ತಿ ಪಡೆದ ಸುರ್ಜೀತ್ ಬಾಲ ಕಾರ್ಮಿಕ ಪದ್ಧತಿಗೆ ಒಳಗಾದ ಹೆಚ್ಚು ನಿರ್ಗತಿಕ ಮಕ್ಕಳಿಗೆ ಸಹಾಯ ಮಾಡುವ ಮೂಲಕ ನನ್ನ ಪ್ರಯತ್ನವನ್ನು ಮಾಡುತ್ತೇನೆ ಎಂದಿದ್ದಾರೆ.
ಸಂಬಂಧಿಸಿದ ಕಚೇರಿಗೆ ದೂರು ನೀಡುವುದು, ಜಾಗೃತಿ ಅಭಿಯಾನಗಳನ್ನು ನಡೆಸುವುದರ ಮೂಲಕ ಬಾಲ ಕಾರ್ಮಿಕ ಪದ್ಧತಿಯಿಂದ ಅನೇಕ ಮಕ್ಕಳನ್ನು ರಕ್ಷಿಸಿ ಸುರ್ಜೀತ್ ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ