ಶಿಮ್ಲಾ: ಹಿಮಾಚಲಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ವೀರಭದ್ರ ಸಿಂಗ್(87) ನಿಧನ ಹೊಂದಿದ್ದಾರೆ.
ಕಳೆದ ಹಲವು ತಿಂಗಳಿನಿಂದ ಅವರು ಅಸ್ವಸ್ಥರಾಗಿದ್ದರು.
ಶಿಮ್ಲಾದಲ್ಲಿರುವ ಇಂದಿರಾ ಗಾಂಧಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಪ್ರಿಲ್ 30ರಂದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ವೀರಭದ್ರ ಸಿಂಗ್ ಅವರು ಇಂದು ಮುಂಜಾನೆ 4 ಗಂಟೆಗೆ ಕೊನೆಯುಸಿರು ಎಳೆದಿದ್ದಾರೆ.
ವೀರಭದ್ರ ಸಿಂಗ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Tags
Nation
