ನವದೆಹಲಿ: ಕೇಂದ್ರದ ನೂತನ ಪ್ರಸಾರ ಖಾತೆ ಸಚಿವರಾಗಿ ನೇಮಕಗೊಂಡಿರುವ ಅನುರಾಗ್ ಠಾಕೂರ್ ಇಂದು ಅಧಿಕಾರ ಸ್ವೀಕರಿಸಿದರು.
ಸಚಿವಾಲಯದ ಹಿರಿಯ ಅಧಿಕಾರಿಗಳು ಅವರನ್ನು ಸ್ವಾಗತಿಸಿದರು. ಇದಕ್ಕೂ ಮೊದಲು ಅವರು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.
ಇದೀಗ ಸಂಪುಟ ವಿಸ್ತರಣೆ ವೇಳೆ ಅವರಿಗೆ ಪದೋನ್ನತಿ ನೀಡಲಾಗಿದ್ದು, ಸಚಿವ ಸಂಪುಟ ದರ್ಜೆಗೆ ಬಡ್ತಿ ನೀಡಲಾಗಿದೆ.
Tags
Nation
