ನವದೆಹಲಿ: ರಾಷ್ಟ್ರೀಯ ವೈದ್ಯರ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ವೈದ್ಯರ ಜತೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಮಹಾಮಾರಿ ಕೊರೋನಾ ತಡೆಗಟ್ಟಲು ವೈದ್ಯರು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. 800ಕ್ಕೂ ಹೆಚ್ಚು ವೈದ್ಯರು ಕರ್ತವ್ಯ ನಿರ್ವಹಣೆ ವೇಳೆ ಮೃತಪಟ್ಟಿದ್ದಾರೆ.
ವೈದ್ಯರನ್ನು ಕೊರೋನಾ ಫ್ರಂಟ್ ವಾರಿಯರ್ಸ್ ಎಂದು ಸರ್ಕಾರ ಪರಿಗಣಿಸಿದೆ.
