ರೈತರಿಗೆ ಮಹತ್ವದ ಮಾಹಿತಿ : ರಾಗಿ ಖರೀದಿ ಅವಧಿ ವಿಸ್ತರಣೆ

 

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾರ್ಚ್29): 2022-23ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ರಾಗಿ ಖರೀದಿ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.

ರಾಜ್ಯದ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಗಿ ಖರೀದಿ ಪ್ರಕ್ರಿಯೆಯು ಇದೇ ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳಬೇಕಾಗಿರುತ್ತದೆ. ಆದರೆ ಕೇಂದ್ರ ಸರ್ಕಾರವು ನಿಗಧಿಪಡಿಸಿರುವ ಗುರಿಯನ್ನು ತಲುಪದೇ ಇರುವ ಕಾರಣ ಕೇಂದ್ರ ಸರ್ಕಾರವು ರಾಜ್ಯದ ರೈತರ ಹಿತದೃಷ್ಠಿಯಿಂದ ಈಗಾಗಲೇ ರಾಗಿಯನ್ನು ಮಾರಾಟ ಮಾಡಲು ನೋಂದಣಿ ಮಾಡಿಕೊಂಡಿರುವ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಿದೆ ಹಾಗೂ ರಾಗಿ ಖರೀದಿ ಕಾರ್ಯಕ್ರವನ್ನು ಏಪ್ರಿಲ್ 30 ರೊಳಗಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ರೈತಭಾಂದವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

The post ರೈತರಿಗೆ ಮಹತ್ವದ ಮಾಹಿತಿ : ರಾಗಿ ಖರೀದಿ ಅವಧಿ ವಿಸ್ತರಣೆ first appeared on Kannada News | suddione.



source https://suddione.com/important-information-for-farmers-extension-of-purchase-period-of-millet/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ