![](https://suddione.com/content/uploads/2023/10/nikhil.webp)
ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಸೋಲಿಸುವ ಪ್ಲ್ಯಾನ್ ರೂಪಿಸಿದೆ. ಈಗಾಗಲೇ ಚುನಾವಣೆಗಾಗಿ ಸಾಕಷ್ಟು ತಯಾರಿ ಕೂಡ ನಡೆಯುತ್ತಿದೆ. ಈ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದಾರೆ. ಮೈತ್ರಿ ಹಾಗೂ ರಾಜಕೀಯದ ಬಗ್ಗೆ ಒಂದಷ್ಟು ಚರ್ಚೆ ನಡೆಸಿದ್ದಾರೆ.
ಸುಮಾರು ಹೊತ್ತು ಯೋಗಿ ಆದಿತ್ಯನಾಥ್ ಅವರ ಬಳಿ ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ರಾಮ, ಲಕ್ಷ್ಮಣ, ಸೀತೆ ಇರುವಂತ ಉಡುಗೊರೆಯನ್ನು ನೀಡಿದ್ದಾರೆ. ಇದನ್ನು ಕಂಡು ಯೋಗಿ ಆದುತ್ಯನಾಥ್ ಖುಷಿಯಾಗಿದ್ದಾರೆ.
ಈ ಸಂಬಂಧ ನಿಖಿಲ್ ಕುಮಾರಸ್ವಾಮಿ ತಮ್ಮ ಸಾಮಾಜಿಕ ಜಾಲತಟಣದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು.
ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು.ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ’ ಎಂದು ಬರೆದುಕೊಂಡಿದ್ದಾರೆ.
The post ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಭೇಟಿಯಾದ ನಿಖಿಲ್..! first appeared on Kannada News | suddione.
source https://suddione.com/nikhil-met-uttar-pradesh-cm-bjp-and-jds-alliance/
0 Comments
If u have any queries, Please let us know