ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ ಎಂದು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕಿ ಅರ್ಚನ ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಅಣು ಬೋಧನಾ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಬಿ.ಇ.ಡಿ. ವಿದ್ಯಾರ್ಥಿಗಳ ಬೋಧನೆಗೆ ಅವಶ್ಯವಿರುವ ಕೌಶಲ್ಯಗಳ ತರಬೇತಿ ನೀಡಲು ಇದೊಂದು ಪ್ರಾಯೋಗಿಕ ಕಾರ್ಯಾಗಾರವಾಗಿದ್ದು, ಬೋಧನೆಯ ಹಲವಾರು ಕೌಶಲ್ಯಗಳನ್ನು ಅಭ್ಯಾಸ ಮಾಡಿ ಕರಗತ ಮಾಡಿಕೊಳ್ಳುವುದು ಅಣು ಬೋಧನೆಯ ವಿಧಾನ ಎಂದು ಹೇಳಿದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಜಯಲಕ್ಷ್ಮಿ ಮಾತನಾಡಿ ಯೋಜನೆ, ಬೋಧನೆ, ಪುಷ್ಠೀಕರಣ, ಪುನರ್ ಯೋಜನೆ, ಪುನರ್ ಬೋಧನೆ, ಪುನರ್ ಪುಷ್ಠೀಕರಣ ಅಣು ಬೋಧನೆಯ ವಿಧಾನಗಳು ಎಂದು ತಿಳಿಸಿದರು.
ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಕೆ.ಎಂ.ವೀರೇಶ್, ಉಪ ಪ್ರಾಂಶುಪಾಲರಾದ ಹೆಚ್.ಎನ್.ಶಿವಕುಮಾರ್, ಉಪನ್ಯಾಸಕರುಗಳಾದ ಡಾ.ಹನುಮಂತರೆಡ್ಡಿ, ಪದ್ಮಶ್ರಿ, ಮಂಜಪ್ಪ ಎಸ್. ಇವರುಗಳು ವೇದಿಕೆಯಲ್ಲಿದ್ದರು.

The post ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ first appeared on Kannada News | suddione.

[Collection]

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ