
ಸುದ್ದಿಒನ್, ಹಿರಿಯೂರು, ಏಪ್ರಿಲ್. 06 : ರಾಷ್ಟ್ರೀಯ ಚಿಂತನೆಗಳ ಮೂಲಕ ದೇಶದ ಅಭಿವೃದ್ಧಿಯ ಪಥಕ್ಕೆ ನಾಂದಿ ಹಾಡಿದ ಪಕ್ಷದ ಹಿರಿಯರನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬೇಕಿದೆ. ತಳಮಟ್ಟದಿಂದ ಪಕ್ಷವನ್ನು ಬಲಪಡಿಸಿಕೊಂಡು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಭಾಜಪ ತಾಲೂಕು ಅಧ್ಯಕ್ಷ ಕೆ. ಅಭಿನಂದನ್ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ವಿಶ್ವದೆಲ್ಲೆ ಬಿಜೆಪಿ ಅತ್ಯಂತ ದೊಡ್ಡ ಪಕ್ಷವಾಗಿದೆ. ಈ ಪಕ್ಷಕ್ಕಾಗಿ ಅನೇಕ ಮುಖಂಡರು, ಕಾರ್ಯಕರ್ತರ ಸೇವೆ ದೊಡ್ಡಮಟ್ಟದಲ್ಲಿ ಇರುತ್ತದೆ. ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾಧ್ಯಕ್ಷರ ಮಾರ್ಗದರ್ಶನ ಮೆರೆಗೆ ಪಕ್ಷವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಕೆಲಸವಾಗಬೇಕು. ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳೋಣ ಎಂದರು.
ರಾಮರಾಜ್ಯ ಕಟ್ಟುವುದೇ ಬಿಜೆಪಿ ಬಹು ದೊಡ್ಡ ಕನಸಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ದೇವಾಲಯ ನಿರ್ಮಾಣ ಮಾಡಿರುವುದು ಬಿಜೆಪಿಯ ಮತ್ತೊಂದು ಕೊಡುಗೆಯಾಗಿದೆ. ನಾವೆಲ್ಲರೂ ಶ್ರೀರಾಮನ ಪೂಜಿಸೋಣ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮೂಲಕ ರಾಜ್ಯದಲ್ಲೂ ರಾಮರಾಜ್ಯ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ವಿಶ್ವನಾಥ್, ಬಿಜೆಪಿ ಮುಖಂಡ ಎನ್.ಆರ್. ಲಕ್ಷ್ಮೀಕಾಂತ್, ತಾಪಂ ಮಾಜಿ ಸದಸ್ಯ ಹಾಲಪ್ಪ, ಜೆಬಿ. ರಾಜು, ನಂದಿಹಳ್ಳಿ ವೇದಮೂರ್ತಿ, ಪಾರ್ಥ, ಸ್ಟೂಡಿಯೋ ಗೋವಿಂದಪ್ಪ, ಚಿತ್ತಯ್ಯ, ಆದಿವಾಲ ಫಾರಂ ಶಶಿ, ಯೋಗೇಶ್, ಪ್ರಕಾಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
[Collection]
0 Comments
If u have any queries, Please let us know