
ಬೆಂಗಳೂರು; ಅನಾರೋಗ್ಯದಿಂದ ವಿಶ್ರಾಂತಿ ಪಡೆಯುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಬಹಳ ದಿನಗಳ ಬಳಿಕ ಇದೀಗ ದೆಹಲಿಗೆ ಭೇಟಿ ನೀಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿ ಮಾಡಲು ಕೇಳಿಕೊಂಡಿದ್ದಾರೆ ಎನ್ನಲಾಗಿದೆ. ದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿಯೇ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದು, ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಡಿಸಿಎಂ ಸ್ಥಾನದ ಬಗ್ಗೆಯೂ ಚರ್ಚೆಯಾಗಿದೆ ಎನ್ನಲಾಗಿದೆ.
ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಸಚಿವ ಸಂಪುಟ ಪುನರ್ ರಚನೆ, ಸರ್ಕಾರ ಮಟ್ಟದಲ್ಲಿ ಆಗಿರುವ ಬೆಳವಣಿಗೆಯ ಬಗ್ಗೆ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ. ಅಲ್ಲದೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಸೇರಿದಂತೆ ರಾಜ್ಯದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಇರುವವರೆಗೂ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವುದಕ್ಕೆ ಸಾಧ್ಯವಿಲ್ಲ ಎಂಬುದು ಸಿದ್ದರಾಮಯ್ಯ ಅವರಿಗೂ ತಿಳಿದಿದೆ.
ಪಕ್ಷದ ಹಿತದೃಷ್ಟಿಯಿಂದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸೇರಿದಂತೆವಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗೆ ಮುನ್ನ ಹೆಚ್ಚಿನ ಡಿಸಿಎಂ ಹುದ್ದೆಗಳನ್ನ ಸೃಷ್ಟಿಸುವ ವಿಚಾರವನ್ನು ರಾಹುಲ್ ಮುಂದೆ ಪ್ರಸ್ತಾಪ ಮಾಡಿದ್ದಾರೆ. ಎನ್ನಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಪರಸ್ಪರ ಅಭಿವೃದ್ಧಿಯಾದಾಗ ದೇಶ ಅಭಿವೃದ್ಧಿಯಾಗುತ್ತದೆ. ಈ ದಿಕ್ಕಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟುಗೂಡಿ ಕೆಲಸ ಮಾಡಲು ಪ್ರಯತ್ನ ಮಾಡಬೇಕು. ಕರ್ನಾಟಕ ಭವನ ಕೇಂದ್ರ ಹಾಗು ರಾಜ್ಯ ಸರ್ಕಾರದ ರಾಯಭಾರಿಯಾಗಿ ಕೆಲಸ ಮಾಡಲಿ ಎಂದು ಇದೇ ವೇಳೆ ಮುಖ್ಯಮಂತ್ರಿಗಳು ಹಾರೈಸಿದ್ದಾರೆ.
source https://suddione.com/cm-siddaramaiah-in-delhi-did-he-demand-an-additional-dcm-post/
0 Comments
If u have any queries, Please let us know