
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 06 : ತಾಲ್ಲೂಕಿನ ದೊಡ್ಡ ಸಿದ್ದವ್ವನಹಳ್ಳಿ ನಿವಾಸಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಪ್ರಾಣಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಹೆಚ್. ವಿ. ನಾಗರಾಜ್ (74 ವರ್ಷ) ಇಂದು ಮಧ್ಯಾನ್ಹ 3:30 ರ ಸುಮಾರಿಗೆ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ದೊಡ್ಡ ಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
[Collection]
0 Comments
If u have any queries, Please let us know