ಕಮ್ಯುನಿಸ್ಟ್ ಪಕ್ಷದಿಂದ ಸೂರಿಗಾಗಿ ಸಮರ : ನಗರಸಭೆ ಎದುರು ಪ್ರತಿಭಟನೆ

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 05 : ಭಾರತ ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಘಟಕದಿಂದ ಸೂರಿಗಾಗಿ ಸಮರ ನಗರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‍ಗೆ ಮನವಿ ಸಲ್ಲಿಸಲಾಯಿತು.

ನಗರದ ದಾವಣಗೆರೆ ರಸ್ತೆಯಲ್ಲಿರುವ ಕಮ್ಯುನಿಸ್ಟ್ ಕಾರ್ಯಾಲಯದಿಂದ ಮೆರವಣಿಗೆ ಮೂಲಕ ನಗರಸಭೆಗೆ ಆಗಮಿಸಿದ ಪ್ರತಿಭಟನಾಕಾರರು ಬಡವರಿಗೆ ವಸತಿ ಸೌಲಭ್ಯಗಳನ್ನು ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡಿ ನಗರದಲ್ಲಿ ನಿವೇಶನ, ಮನೆಗಳಿಲ್ಲದೆ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಬಡವರು ಜೀವಿಸುವುದು ಕಷ್ಟವಾಗಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ವಸತಿಗಾಗಿ ಹೋರಾಟ ನಡೆಸಿದ ಪ್ರತಿಫಲವಾಗಿ ರಾಜ್ಯದ ಪ್ರತಿ ಹಳ್ಳಿ ಹಳ್ಳಿಗಳಲ್ಲಿಯೂ ಸರ್ವೆ ನಡೆಸಿ ನಿವೇಶನ ಮನೆ ಇಲ್ಲದವರನ್ನು ಗುರುತಿಸುವಂತೆ ರಾಜ್ಯದ ಮುಖ್ಯಮಂತ್ರಿ ಆದೇಶಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದರು.
ಕಮ್ಯುನಿಸ್ಟ್ ತಾಲ್ಲೂಕು ಕಾರ್ಯದರ್ಶಿ ಟಿ.ಆರ್.ಉಮಾಪತಿ, ಸಹ ಕಾರ್ಯದರ್ಶಿಗಳಾದ ಈ.ಸತ್ಯಕೀರ್ತಿ, ಜಯದೇವಮೂರ್ತಿ, ಪರ್ವಿನ್‍ತಾಜ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ