ಒಳ ಮೀಸಲಾತಿ ಜಾತಿ ಗಣತಿ : ಛಲವಾದಿ-ಹೊಲೆಯ ಎಂದು ಬರೆಯಿಸಿ : ಶಿವಪ್ರಸಾದ್ ಮನವಿ

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 06 : ಒಳ ಮೀಸಲಾತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಗಣತಿ ಕಾರ್ಯ ಆರಂಭಿಸಿದ್ದು, ಆದಿ ದ್ರಾವಿಡ, ಆದಿ ಕರ್ನಾಟಕ ಹಾಗೂ ಇತರೆ ಉಪ ಜಾತಿಯ ಛಲವಾದಿ ಬಂಧುಗಳು ಕಡ್ಡಾಯವಾಗಿ ಛಲವಾದಿ-ಹೊಲೆಯ ಎಂದು ಬರೆಸುವಂತೆ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ರಾಜ್ಯ ಸಮಿತಿ
ನಿರ್ದೇಶಕ ಶಿವಪ್ರಸಾದ್ ಎಸ್. ವಿನಂತಿಸಿದ್ದಾರೆ.

ಜಸ್ಟಿಸ್ ನಾಗಮೋಹನ್‍ದಾಸ್‍ರವರ ಏಕ ಸದಸ್ಯ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಮೀಸಲಾತಿ ಪ್ರಮಾಣವನ್ನು ಜನಸಂಖ್ಯೆಗನುಗುಣವಾಗಿ ಹಂಚಿಕೆ ಮಾಡಲು ಜಾತಿ ಗಣತಿಯನ್ನು ಆರಂಭಿಸಿದೆ. ಮನೆ ಮನೆಗೆ ಗಣತಿಗೆ ಬರುವವರಿಗೆ ನಿಖರವಾದ ಮಾಹಿತಿಯನ್ನು ನೀಡಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಶಿವಪ್ರಸಾದ್ ಎಸ್. ಛಲವಾದಿಗಳಲ್ಲಿ ಮನವಿ ಮಾಡಿದ್ದಾರೆ.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ