ಹಿರಿಯೂರು : ಶಾಲಾ ದಾಖಲಾತಿ ಪ್ರಕ್ರಿಯೆ ಪಾರದರ್ಶಕವಾಗಿರಲಿ :  ಬಿಇಓ ಸೂಚನೆ

ಸುದ್ದಿಒನ್, ಹಿರಿಯೂರು, ಮೇ. 09 : ನಗರದ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶಾಲಾ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದ್ದು ಇಲಾಖೆ ನಿಯಮಗಳನ್ನು ಪಾಲನೆ ಮಾಡಿಕೊಂಡು ಮಾರ್ಗಸೂಚಿಯಂತೆ ಮಕ್ಕಳ ದಾಖಲಾತಿ ಮಾಡಿಕೊಳ್ಳಬೇಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಎಂ ತಿಪ್ಪೇಸ್ವಾಮಿ ಖಾಸಗಿ ಶಾಲೆಯ ಆಡಳಿತ ಮಂಡಳಿಯವರಿಗೆ ಸೂಚನೆ ನೀಡಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು ಈಗಾಗಲೇ ದಾಖಲಾತಿ ಪ್ರಕ್ರಿಯೆಗೆ ಮೊದಲೇ ಒಂದು ಸಭೆಯನ್ನು ನಡೆಸಿದ್ದು, ಎಲ್ಲ ಶಾಲೆಗಳಿಗೂ ಇಲಾಖಾ ನಿಯಮಗಳ ಬಗ್ಗೆ ಸೂಕ್ತ ತಿಳುವಳಿಕೆ ನೀಡಲಾಗಿದೆ. ಶಾಲೆಯಲ್ಲಿ ಸಂಗ್ರಹಿಸುವ ಶುಲ್ಕದ ವಿವರವನ್ನು ಪ್ರಧಾನವಾಗಿ ಕಾಣುವಂತೆ ಫ್ಲೆಕ್ಸ್ ನಲ್ಲಿ ಅಳವಡಿಿರುವುದು. ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ನಿಯಮಾನುಸಾರ ಕಾನೂನು ಕ್ರಮ ವಹಿಸಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇರುದ್ರಪ್ಪ, ಶಿಕ್ಷಣ ಸಂಯೋಜಕರಾದ ಪುಟ್ಟಸ್ವಾಮಿ, ಸೈಯದ್ ಜಾಫರ್, ನಾಗರಾಜ್, ಶಿವಾನಂದ್, ರಂಗಸ್ವಾಮಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಾದ ನಿಜಗುಣಮೂರ್ತಿ, ಚಿದಾನಂದ್, ನಾಗರಾಜ್, ಪ್ರಸನ್ನ ಮತ್ತು ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಮತ್ತು ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ