ಕಣಿವೆಗೆ ಬಿದ್ದ ಸೇನಾ ವಾಹನ : ಮೂವರು ಯೋಧರು ಸಾವು

ಸುದ್ದಿಒನ್ : ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೂವರು ಸೈನಿಕರಿದ್ದ ಸೇನಾ ವಾಹನವು ಕಂದಕಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ ಜಮ್ಮುವಿನಿಂದ ಶ್ರೀನಗರಕ್ಕೆ ಬೆಂಗಾವಲು ಪಡೆಯು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ರಾಂಬನ್ ಜಿಲ್ಲೆಯ ಬಟ್ಟೆರೆ ಚಶ್ಮಾ ಬಳಿಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಭಾನುವಾರ ಬೆಳಿಗ್ಗೆ 11.30 ಕ್ಕೆ ಮಿಲಿಟರಿ ವಾಹನವೊಂದು ನಿಯಂತ್ರಣ ತಪ್ಪಿ 700 ಅಡಿ ಆಳದ ಕಂದಕಕ್ಕೆ ಉರುಳಿತು. ವಾಹನವು ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಹಲವಾರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.

ಮೃತ ಸೈನಿಕರನ್ನು ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮಾನ್ ಬಹದ್ದೂರ್ ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಸ್ವಯಂಸೇವಕರು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ.



source https://suddione.com/army-vehicle-falls-into-valley-three-soldiers-killed/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ