
ಚಿತ್ರದುರ್ಗ. ಜುಲೈ. 09: ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಇದೇ ಜುಲೈ 12ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ 7ಕ್ಕೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 11ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಚಿತ್ರದುರ್ಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2ಕ್ಕೆ ಚಿತ್ರದುರ್ಗದಿಂದ ದಾವಣಗೆರೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.


0 Comments
If u have any queries, Please let us know