ಜನನಿಬಿಡ ಪ್ರದೇಶಗಳಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸಿ : ಕರುನಾಡ ವಿಜಯಸೇನೆ ಮನವಿ

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ನಗರದ ಜನನಿಬಿಡ ಪ್ರದೇಶಗಳಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸುವಂತೆ ಕರುನಾಡ ವಿಜಯಸೇನೆ ವತಿಯಿಂದ ನಗರಸಭೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ನಗರದಲ್ಲಿ ಅಳವಡಿಸಿರುವ ಕ್ಯಾಮರಾಗಳು ಬಹುತೇಕ ಕೆಟ್ಟು ಹೋಗಿದ್ದು, ಒಂಟಿ ಹೆಣ್ಣು ಮಕ್ಕಳ ಸರಗಳ್ಳತನ ಜಾಸ್ತಿಯಾಗುತ್ತಿದೆ. ಮನೆಯಿಂದ ಕಸ ತಂದು ಬೀದಿಗೆ ಸುರಿಯುವವರು ಹೆಚ್ಚಾಗಿದ್ದಾರೆ. ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆ. ಅನೇಕ ಕಡೆ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಕಳ್ಳತನ, ಸುಲಿಗೆ, ಸರಗಳ್ಳತನ ಹೆಚ್ಚುತ್ತಿದ್ದರೂ ಸಿ.ಸಿ.ಕ್ಯಾಮರಾಗಳು ಇಲ್ಲದ ಕಾರಣ ಪತ್ತೆ ಹಚ್ಚುವುದು ಕಷ್ಟವಾಗುತ್ತಿದೆ. ಚಂದ್ರವಳ್ಳಿ ಕ್ರಾಸ್‍ನಲ್ಲಿ ರಾಶಿಗಟ್ಟಲೆ ಕಸ ಸುರಿಯುತ್ತಿರುವುದನ್ನು ವಿರೋಧಿಸಿ ಸಿ.ಸಿ.ಕ್ಯಾಮರಾ ಅಳವಡಿಸುವಂತೆ ಧರಣಿ ನಡೆಸಲಾಗಿತ್ತು. ಇದುವರೆವಿಗೂ ಕ್ರಮ ಕೈಗೊಂಡಿಲ್ಲ. ಶಾಲಾ-ಕಾಲೇಜು ಮುಂಭಾಗ, ಆಸ್ಪತ್ರೆ, ಬಸ್‍ನಿಲ್ದಾಣ, ಮಾರುಕಟ್ಟೆ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಕ್ಯಾಮರಾ ಅಳವಡಿಸುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ
ಕೆ.ಟಿ.ಶಿವಕುಮಾರ್ ಪೌರಾಯುಕ್ತರನ್ನು ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಉಪಾಧ್ಯಕ್ಷ ಮುಜಾಹಿದ್, ಹರಿಶ್‍ಕುಮಾರ್ ಸಿ.ಆರ್.
ಜಗದೀಶ್ ವಿ. ಅಖಿಲೇಶ್, ವಿಜಯಬಾಬು, ಅವಿನಾಶ್ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ