
ಬೆಂಗಳೂರು: ಹಾಸನದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳಾಗಿದ್ದು, ಇದಕ್ಕೆ ಕೊರೋನಾ ಲಸಿಜೆಯೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಅವರು ಕೂಡ ಹೇಳಿದ್ದರು. ಇದೀಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೊರೋನಾ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ಇಂದು ತಜ್ಞರ ಜೊತೆಗೆ ಸಭೆ ನಡೆಸಿದ ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಕೊರೊನಾ ಲಸಿಕೆಯಿಂದ ಹೃದಯಾಘಾತ ಸಂಭವಿಸಿಲ್ಲ. ಕೊರೋನಾದಿಂದ ಗುಣಮುಖರಾದವರಿಗೆ ಈ ಹೃದಯಾಘಾತ ಸಂಭವಿಸಿದೆ ಎಂದರು. ಕೊರೊನಾ ರೋಗದಿಂದ ಸ್ವಲ್ಪ ಮಟ್ಟಿಗೆ ಹೃದಯಾಘಾತ ಹೆಚ್ಚಾಗಿದೆ. ಕೊರೊನಾ ಬಂದ ಒಂದು ವರ್ಷದೊಳಗೆ ರಕ್ತನಾಳ ಬ್ಲಾಕೇಜ್ ಆಗುವ ಸಾಧ್ಯತೆ ಇದೆ. ಆದರೆ ಮೂರು ವರ್ಷದ ನಂತರ ಅದರ ಪರಿಣಾಮ ಅಷ್ಟರಮಟ್ಟಿಗೆ ಇಲ್ಲ. ಹೃದಯಾಘಾತಕ್ಕೆ ಲಸಿಜೆ ಕಾರಣವಲ್ಲ. ಕೊರೊನಾ ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಆದರೆ ಎಂಆರ್ಎನ್ಎ ವ್ಯಾಕ್ಸಿನ್ ಬಗ್ಗೆ ಸ್ವಲ್ಪಕಾಲ ಅನುಮಾನ ಇದೆ. ಈ ವ್ಯಾಕ್ಸಿನ್ ಅನ್ನು ನಮ್ಮ ದೇಶದಲ್ಲಿ ಯಾರು ತೆಗೆದುಕೊಂಡಿಲ್ಲ. ಹೃದಯಾಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡುತ್ತೇವೆ. ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಮಾಡುವುದು ಕಡ್ಡಾಯ ಎಂದಿದ್ದಾರೆ.
ಹೃದಯಾಘಾತದ ಬಗ್ಗೆ ಪ್ರತ್ಯೇಕ ಪಠ್ಯ ಅಳವಡಿಕೆ ಮಾಡಲಾಗುವುದು. ಶಿಕ್ಷಣ ಇಲಾಖೆ ಮುಂದಿನ ವರ್ಷದಿಂದ ಪಠ್ಯ ಅಳವಡಿಕೆ ಮಾಡುತ್ತೆ. ತಾಲೂಕು ಆಸ್ಪತ್ರೆಗಳಿಗೂ ಡಾ.ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲಾಗುತ್ತದೆ. ಸರ್ಕಾರಿ ನೌಕರರು, ಗುತ್ತಿಗೆ ನೌಕರರು ತಪಾಸಣೆ ಮಾಡಿಸಿಕೊಳ್ಳಬೇಕು. ಜನರ ಜೀವನಶೈಲಿ ಹೃದಯಘಾತಕ್ಕೆ ಕಾರಣವಾಗಿದೆ. ಶೇ 50 ಕ್ಕಿಂತ ಹೆಚ್ಚು ಧೂಮಪಾನಿಗಳಿಗೆ ಹೃದಯಘಾತವಾಗಿದೆ ಎಂದು ತಿಳಿಸಿದರು.


