ಚಿತ್ರದುರ್ಗ : ನಗರಸಭೆ ಉಪಾಧ್ಯಕ್ಷೆ ಸ್ಥಾನಕ್ಕೆ ಜಿ.ಎಸ್.ಶ್ರೀದೇವಿ ರಾಜೀನಾಮೆ

ಸುದ್ದಿಒನ್, ಚಿತ್ರದುರ್ಗ,ಜು.08: ನಗರಸಭೆ ಉಪಾಧ್ಯಕ್ಷರಾಗಿದ್ದ ಜಿ.ಎಸ್.ಶ್ರೀದೇವಿ ಅವರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ತಮ್ಮ ಉಪಾಧ್ಯಕ್ಷೆ ಸ್ಥಾನವನ್ನು ತ್ಯಜಿಸಿದ್ದಾರೆ.

ಚಿತ್ರದುರ್ಗ ನಗರಸಭೆ ವ್ಯಾಪ್ತಿಯ 33 ನೇ ವಾರ್ಡಿನ ಸದಸ್ಯರಾಗಿ ಆಯ್ಕೆಯಾಗಿದ್ದ ಜಿ.ಎಸ್.ಶ್ರೀದೇವಿ ಕಳೆದ 2024 ರ ಆಗಸ್ಟ್ ತಿಂಗಳಲ್ಲಿ ನಗರಸಭೆಯ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ 11 ತಿಂಗಳುಗಳ ಕಾಲ ಕಾರ್ಯನಿರ್ವಹಿಸಿದ್ದರು. ಅವರು ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯವಾಗದೇ ಇರುವುದರಿಂದ  ಉಪಾಧ್ಯಕ್ಷ ಸ್ಥಾನಕ್ಕೆ ಸ್ವ-ಇಚ್ಚೆಯಿಂದ ರಾಜೀನಾಮೆ ನೀಡಿರುವುದಾಗಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ