ನಾಳೆ ಚಿತ್ರದುರ್ಗಕ್ಕೆ ಸಚಿವ ಶಿವರಾಜ ಎಸ್ ತಂಗಡಗಿ ಆಗಮನ

ಚಿತ್ರದುರ್ಗ. ಜುಲೈ.07: ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್ ತಂಗಡಗಿ ಜುಲೈ 8 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಗ್ಗೆ 11:30ಕ್ಕೆ ಕೊಪ್ಪಳದ ಕಾರಟಗಿಯಿಂದ ರಸ್ತೆ ಮೂಲಕ ಪ್ರಯಾಣಿಸುವ ಅವರು, ಮಧ್ಯಾಹ್ನ 1:30ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು. ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ನಿವಾಸದ ಹತ್ತಿರದ ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪನವರ ಮನೆಗೆ ಭೇಟಿ ನೀಡುವರು. ಬಳಿಕ ಮಧ್ಯಾಹ್ನ 3:30ಕ್ಕೆ ಸಿಬಾರ ಗ್ರಾಮದ ಬಳಿಯ ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ವತಿಯಿಂದ ನಿರ್ವಹಣೆ ಮಾಡುತ್ತಿರುವ ಎಸ್.ನಿಜಲಿಂಗಪ್ಪನವರ ಸ್ಮಾರಕ ‘ಪುಣ್ಯ ಭೂಮಿ’ಗೆ ಭೇಟಿ ನೀಡುವರು. ಸಂಜೆ 5 ಗಂಟಗೆ ರಸ್ತೆ ಮೂಲಕ ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ