ಇಂದು ಚಿನ್ನದ ದರ ಮತ್ತೆ ಏರಿಕೆ : ಎಷ್ಟಿದೆ ಮಾರುಕಟ್ಟೆಯಲ್ಲಿ

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಏರಿಕೆಯಾಗಿದೆ. ಇಂದು 22 ಕ್ಯಾರಟ್ ನ ಒಂದು ಗ್ರಾಂಗೆ 50 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 9,060 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 55 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 9,884 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 90,600 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 98,840 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 90,600 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 90,750 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 86,360 ರೂಪಾಯಿ ಇದೆ. ಅಮೆರಿಕಾದಲ್ಲಿ 88,780 ಇದೆ. ಸೌದಿಯಲ್ಲಿ 86,450 ಇದೆ.

 

ಬೆಳ್ಳಿ ಬೆಲೆಯಲ್ಲೂ ಯಾವುದೇ ವ್ಯತ್ಯಯವಾಗಿಲ್ಲ. ಹೀಗಾಗಿ ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 110 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 11,000 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 11,000 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 12,000 ರೂಪಾಯಿ ಇದೆ.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ