ದೆಹಲಿಗೆ ಸಿಎಂ ಪ್ರವಾಸ : ಹೈಕಮಾಂಡ್ ಜೊತೆಗೆ ಚರ್ಚೆ ಇತ್ತ ಶಾಸಕರಿಗೆ ಸುರ್ಜೆವಾಲ‌ ಕ್ಲಾಸ್..!

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸೆಪ್ಟೆಂಬರ್ ಕ್ರಾಂತಿ ಜೋರು ಚರ್ಚೆಯಲ್ಲಿದೆ. ರಾಜಣ್ಣ ಹೇಳಿದ ಸೆಪ್ಟೆಂಬರ್ ಕ್ರಾಂತಿಯಲ್ಲಿ ಏನೆಲ್ಲಾ ಬದಲಾವಣೆಗಳು ಆಗಬಹುದು ಎಂಬ ಕುತೂಹಲ ಜನರಲ್ಲಿದೆ. ಸಿದ್ದರಾಮಯ್ಯ ಅವರಿಗೆ ಎಐಸಿಸಿ ಮಟ್ಟದಲ್ಲಿ ಬೇರೆ ಜವಾಬ್ದಾರಿ ನೀಡುತ್ತಿದ್ದಾರೆ. ಈ ಮಧ್ಯೆ ಸಿಎಂ ಸ್ಥಾನದ ಬಗ್ಗೆಯೇ ಜೋರು ಚರ್ಚೆಗಳಾಗುತ್ತಿದ್ದು, ಅತ್ತ ಡಿಸಿಎಂ ಡಿಕೆ ಶಿವಕುಮಾರ್ ಅದಾಗಲೇ ದೆಹಲಿಯಲ್ಲಿ ಕೂತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರು ಕೂಡ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದರೆ. ಹೈಕಮಾಂಡ್ ಜೊತೆಗೆ ಹಲವು ಚರ್ಚೆಗಳನ್ನ ಮಾಡ್ತಾರೆ.

ದೆಹಲಿಯಲ್ಲಿಯೇ ವಾಸ್ತವ್ಯ ಹೂಡಿ ರಾಜ್ಯದ ಸ್ಥಿತಿಗತಿ ಬಗ್ಗೆ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಪರಿಷತ್ ಸ್ಥಾನ, ನಿಗಮ ಮಂಡಳಿ, ಕೆಪಿಸಿಸಿ ಪದಾಧಿಕಾರಿಗಳ ನೇಮಕ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸಿಎಂ ಬದಲಾವಣೆಯ ಚರ್ಚೆಯೂ ಜೋರಾಗಿದೆ. ಪಕ್ಷದಲ್ಲಿಯೇ ಹಲವರು ಈ ಬಗ್ಗೆ ಬಹಿರಂಗ ಹೇಳಿಕೆ ಕೊಡುತ್ತಿರುವುದರಿಂದ ಈ ಬಗ್ಗೆಯೂ ಚರ್ಚೆ ಮಾಡುವ ಸಾಧ್ಯತೆ ಇದೆ.

ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೇ ಹಲವು ವಿಚಾರಕ್ಕೆ ಬಹಿರಂಗ ಹೇಳಿಕೆಯನ್ನ ಕೊಡುತ್ತಿದ್ದಾರೆ. ಸರ್ಕಾರ ಹಾಗೂ ಸಿಎಂ ಸ್ಥಾನದ ಬಗ್ಗೆ ಹೇಳಿಕೆ ನೀಡ್ತಾ ಇದ್ದಾರೆ. ಇತ್ತೀಚೆಗೆ ಬಸವರಾಜ್ ರಾಯರೆಡ್ಡಿ ಅವರು ರಸ್ತೆ ಬೇಕು ಅಂದ್ರೆ ಗ್ಯಾರಂಟಿ ಗಳನ್ನ ನಿಲ್ಲಿಸಬೇಕು ಅಂದಿದ್ರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಅಸಮಾಧಾನಿತ ಶಾಸಕರ ಜೊತೆಗೆ ರಣದೀಪ್ ಸುರ್ಜೆವಾಲ ಒನ್ ಟು ಒನ್ ಚರ್ಚೆ ನಡೆಸುತ್ತಿದ್ದಾರೆ. ಇಂದು ಕೂಡ ಶಾಸಕರ ಜೊತೆ ಚರ್ಚೆ ನಡೆಸಲಿದ್ದಾರೆ. ಇದರ ಜೊತೆಗೆ ಈಗಾಗಲೇ ಬಸವರಾಜ್ ರಾಯರೆಡ್ಡಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ