ದುರ್ಗೋತ್ಸವ ಆಚರಣೆಗೆ ಪ್ರಸ್ತಾವನೆ ಸಲ್ಲಿಸಿ : ಸಚಿವ ಶಿವರಾಜ ಎಸ್ ತಂಗಡಗಿ

ಚಿತ್ರದುರ್ಗ, ಜುಲೈ. 08 : ದುರ್ಗೋತ್ಸವ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಪ್ರಸ್ತಾವ ಸಲ್ಲಿಸಿದರೆ ನಿಶ್ವಿತವಾಗಿ ದುರ್ಗೋತ್ಸವ ಆಚರಣೆ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದರು.

ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ವಸತಿ ಗೃಹ ಬಳಿ ಇರುವ ಎಸ್. ನಿಜಲಿಂಗಪ್ಪನವರ ನಿವಾಸಕ್ಕೆ ಹಾಗೂ ತಾಲ್ಲೂಕಿನ ಸೀಬಾರದ ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ಗೆ ಭೇಟಿ ನೀಡಿ, ಎಸ್. ನಿಜಲಿಂಗಪ್ಪನವರ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ, ನಂತರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಕನ್ನಡ ಪರ ಸಂಘಟನೆಗಳು ದುರ್ಗೋತ್ಸವ ಆಚರಿಸುವಂತೆ ಮನವಿ ಸಲ್ಲಿಸಿದ್ದಾರೆ.  ಈ ಬಾರಿ ನಾಡಿನಲ್ಲಿ ಉತ್ತಮ ಮಳೆಯಾಗಿದ್ದು, ಅಣೆಕಟ್ಟುಗಳು ತುಂಬಿ ತುಳುಕುತ್ತಿವೆ. ರೈತರು ಸಂತಸದಿಂದಿದ್ದಾರೆ. ಇಂತಹ ಸಂದರ್ಭದಲ್ಲಿ ಉತ್ಸವಗಳ ಆಚರಣೆ ಮಾಡುವುದು ತಪ್ಪಲ್ಲ.  ಈ ಹಿಂದೆ ಎರಡು ಬಾರಿ ಐತಿಹಾಸಿಕ ಹಿನ್ನಲೆಯ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಯೋಜಿಸಲಾಗಿತ್ತು ಎಂದು ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರು ಗಮನಕ್ಕೆ ತಂದಿದ್ದಾರೆ.

ಮುಖ್ಯಮಂತ್ರಿಗಳು ಸಹ ದುರ್ಗೋತ್ಸವಕ್ಕೆ ಆಚರಣೆಗೆ ಅವಕಾಶ ಹಾಗೂ ಸಹಕಾರ ನೀಡುತ್ತಾರೆ ಎಂಬ ಭರವಸೆ ಇದೆ.  ಹೀಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಸಚಿವರು ಹೇಳಿದರು.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ