ಚಿತ್ರದುರ್ಗ : ಪಾರ್ಶ್ವನಾಥ ಶಾಲೆಯಲ್ಲಿ ರಕ್ಷಾ ಬಂಧನವನ್ನು ಆಚರಣೆ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 09 : ನಗರದ ಪಾರ್ಶ್ವನಾಥ ವಿದ್ಯಾ ಸಂಸ್ಥೆಯಲ್ಲಿ ಶನಿವಾರ ಶಾಲೆಯ ಮಕ್ಕಳೊಂದಿಗೆ ರಕ್ಷಾ ಬಂಧನವನ್ನು ಆಚರಿಸಲಾಯಿತು.

ಶಾಲೆಯಲ್ಲಿನ ಗಂಡು ಮಕ್ಳಳು ಹಾಗೂ ಹೆಣ್ಣು ಮಕ್ಕಳನ್ನು ಎದರು ಬದರು ಕೂರಿಸಿ ಹೆಣ್ಣು ಮಕ್ಕಳಿಂದ ಗಂಡು ಮಕ್ಕಳ ಬಲಗೈಗೆ ರಾಖಿಯನ್ನು ಕಟ್ಟಿಸುವುದರ ಮೂಲಕ ರಾಖಿ ಹಬ್ಬವನ್ನು ಅಚರಣೆ ಮಾಡಲಾಯಿತು.

ಪಾರ್ಶ್ವನಾಥ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಬಾಬುಲಾಲ್ ಮಾತನಾಡಿ, ಹಬ್ಬಗಳ ತವರೂರಾದ ಭಾರತ ದೇಶದಲ್ಲಿ ಹಬ್ಬ ಹರಿದಿನಗಳಿಂದ ಕೂಡಿದ ಶ್ರಾವಣ ಮಾಸಕ್ಕೆ ವಿಶೇಷ ಮಹತ್ವ ಇದೆ. ಶ್ರವಣ, ಪೂಜಾ-ಪಾಠಗಳು, ಧ್ಯಾನ-ಧಾರಣೆಗಳು, ಚಿಂತನೆಗಳ ಮಾಸವೇ ಶ್ರಾವಣ. ನಾಗಚೌತಿ, ನಾಗಪಂಚಮಿ, ಶ್ರಾವಣ ಸೋಮವಾರ, ಶ್ರಾವಣ ಶುಕ್ರವಾರ, ಗೋಕುಲಾಷ್ಟಮಿ, ನೂಲಹುಣ್ಣಿಮೆ, ಹೀಗೆ ಪ್ರತಿದಿನವು ಹಬ್ಬ.  ಈ ಎಲ್ಲ ಹಬ್ಬಗಳಲ್ಲಿ “ನೂಲಹುಣ್ಣಿಮೆ” ಅಥವಾ `ರಕ್ಷಾಬಂಧನ’ ಒಂದು ಪ್ರಮುಖ ಹಬ್ಬವಾಗಿದೆ ರಕ್ಷಾ ಬಂಧನ ಭಾರತದ ಸಂಸ್ಕøತಿ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿ ತೋರಿಸುವ, ಅನೇಕ ಆಧ್ಯಾತ್ಮಿಕ ರಹಸ್ಯಗಳನ್ನು ಬೆಳಗಿಸುವ ಮತ್ತು ಸಾರ್ವತ್ರಿಕ ಸಹೋದರ-ಸಹೋದರಿ ಸಂಬಂಧವನ್ನು ನಮಗೆ ನೆನಪಿಸುವ ಕೊಡುಗೆಯಾಗಿದೆ. ರಕ್ಷಾಬಂಧನ ಹಬ್ಬವು ಪ್ರಾಚೀನ ಕಾಲದಿಂದ ನಡೆದು ಬಂದ ಹಬ್ಬವಾಗಿದ್ದು ವಿಶ್ವಕ್ಕೆ ಸ್ನೇಹ ಮತ್ತು ಮಮತೆಯ ಸಂದೇಶ ನೀಡುತ್ತದೆ. 4-5 ನಿಮಿಷಗಳಲ್ಲಿ ಮುಗಿಯುವ ರಾಖಿ ಕಟ್ಟುವ ಈ ಕಾರ್ಯಕ್ರಮ ಸೋದರ-ಸೋದರಿಯ ಸಂಬಂಧವನ್ನು ಗಟ್ಟಿಗೊಳಿಸುತ್ತದೆ. ಈ ಮಧುರ ಸಂಬಂಧ ಉಸಿರು ಇರುವವರೆಗೂ ಇರುತ್ತದೆ. ಕಟ್ಟಿರುವ ದಾರ ಹೋದರೂ ಹೃದಯದಲ್ಲಿ ಇರುವ ಸ್ನೇಹ ದೃಢವಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಮುಕೇಶ್ ಕುಮಾರ್, ಸಲಹಾ ಸದಸ್ಯರಾದ ಸುರೇಶ್ ಮುತ್ತಾ, ಕಾರ್ಯದರ್ಶಿ ಸುರೇಶ್ ಕುಮಾರ್, ಸಹ ಕಾರ್ಯದರ್ಶಿ ಸುರೇಶ್ ಪಾಟೀಯತ್, ಖಜಾಂಚಿ ರಾಜೇಂದ್ರ ಜೈನ್, ಸದಸ್ಯರಾದ ವಿಪುಲ್, ಆಶೀಕ್ ಕುಮಾರ್, ವಿಕ್ರಂತ್ ಬಾಬುಲಾಲ್, ಜೆವೇರಿಲಾಲ್ ಹಾಗೂ ಮುಖ್ಯ ಶಿಕ್ಷಕಿಯಾದ ನಾಜಿಮ ಸ್ವಾಲೆಹಾ ಸೇರಿದಂತೆ ಶಾಲಾ ಭೋದಕ ಹಾಗೂ ಬೋದಕೇತರ ಸಿಬ್ಬಂದಿ ಹಾಜರಿದ್ದರು ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ