ಮದ್ದೂರು ಗಣೇಶೋತ್ಸವ : 21 ಮಂದಿ ಅರೆಸ್ಟ್

ಮಂಡ್ಯ: ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ಕಲ್ಲು ತೂರಾಟದ ಘಟನೆ ಸಂಭವಿಸಿದೆ. ಮಂಡ್ಯದ ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಕಲ್ಲು ತೂರಾಟದ ಘಟನೆ ನಡೆದಿದೆ. ಮಸೀದಿ ಕಡೆಯಿಂದ ಕಲ್ಲುಗಳನ್ನು ಎಸೆದ ಬಗ್ಗೆ ಮಾಹಿತಿ ಇರುವ ಕಾರಣ ಅವರನ್ನು ಅರೆಸ್ಟ್ ಮಾಡಲಾಗಿದೆ. ಘಟನೆ ನಡೆದ ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ.

ಇನ್ನು ಈ ಸಂಬಂಧ ಸಚಿವ ಚೆಲುವರಾಯಸ್ವಾಮಿ ಅವರು ಮಾತನಾಡಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಸುಮ್ಮನೆ ರಾಜಕೀಯ ಮಾಡ್ತಾ ಇದ್ದಾರೆ. ತಕ್ಷಣ ಎಫ್ಐಆರ್ ದಾಖಲಿಸಿಕೊಂಡು 21 ಜನ ಮುಸ್ಲಿಮರನ್ನು ಬಂಧಿಸಲಾಗಿದೆ. ಅದರಲ್ಲಿ ಹೊರಗಡೆಯ ಒಂದಿಬ್ಬರು ಮೂರು ಜನ ಇರಬಹುದು ಎನ್ನಲಾಗಿದೆ. ಹಿಂದೂಗಳ ಮೇಲೆ ಯಾವುದೇ ಕೇಸ್ ಹಾಕಿಲ್ಲ, ಯಾರನ್ನು ಬಂಧನವೂ ಮಾಡಿಲ್ಲ. ಬಹುಶಃ ಇಷ್ಟು ಬೇಗ ಯಾವುದೇ ಪ್ರಕರಣದಲ್ಲಿ ಕ್ರಮ ಆಗಿಲ್ಲ. ಕಲ್ಲೆಸೆತ ಮಾಡಿದವರ ಮೇಲೆ ಕ್ರಮ ಜರುಗಿಸಿದ ಮೇಲೆ ಅವರು ಕೇಳುವುದಾದರೆ ಹೆಚ್ಚುವರಿ ತನಿಖೆ ಕೇಳಬಹುದಿತ್ತು. ಇನ್ನೂ ಹೆಚ್ಚಿನ ಕ್ರಮ ತೆಗೆದುಕೊಳ್ಳಿ ಎನ್ನಬಹುದಿತ್ತು. ಅದು ಬಿಟ್ಟು ಪ್ರತಿಭಟನೆ ನೆಪದಲ್ಲಿ ಕೋಮುಗಲಭೆ ಮಾಡುವಂತ ಪ್ರಯತ್ನ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವಂತಹದ್ದಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಈ ಥರಹದ ಘಟನೆಗಳು ನಡೆದಾಗ ಅವರಿಗೆ ಪ್ರಶ್ನೆ ಮಾಡುವ ಹಕ್ಕಿದೆ. ಆದರೆ, ಇಲ್ಲಿ ಕ್ರಮ ಆಗಿದೆ. 21 ಜನರ ಬಂಧನವಾಗಿದೆ, ಎಫ್‌ಐಆರ್ ಆಗಿದೆ. ಇನ್ನು ಏನಾದರೂ ಹೆಚ್ಚುವರಿ ಕ್ರಮ ಆಗಬೇಕಿದ್ದರೆ ಒಂದು ಮನವಿ ಸಲ್ಲಿಸಲಿ ಅಥವಾ ಜಿಲ್ಲಾಡಳಿತಕ್ಕೆ ಹೇಳಲಿ. ಅದನ್ನು ಬಿಟ್ಟು ಮೆರವಣಿಗೆ, ಪ್ರತಿಭಟನೆ ಹೆಸರಲ್ಲಿ ಕೋಮುಗಲಭೆಗೆ ಪ್ರಚೋದನೆ ಕೊಡಬಾರದು ಎಂದರು.

{}

Post a Comment

0 Comments