
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 07 : ಶ್ರೀ ಮಾದಾರ ಚನ್ನಯ್ಯ ಸೇವಾ ಸಮಿತಿಯ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಮುದ್ದಾಪುರ ಪರಶುರಾಮ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ. ಸಮುದಾಯದ ಅಭಿವೃದ್ಧಿ, ಮಾದಿಗ ಸಮುದಾಯದ ಕಾಲೋನಿಗಳಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಿಸುವುದು ಸಾಮಾಜಿಕ, ರಾಜಕೀಯ, ಆರ್ಥಿಕ ಅಭಿವೃದ್ಧಿ ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಿ ಸಮುದಾಯವನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಮಾದಾರ ಚನ್ನಯ್ಯ ಸೇವಾ ಸಮಿತಿಯನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದು
ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದ್ದಾರೆ.



0 Comments
If u have any queries, Please let us know