ಆಂಧ್ರಪ್ರದೇಶ: ಕಾಲ್ತುಳಿತ ಪ್ರಕರಣಗಳಂತು ಇತ್ತೀಚೆಗೆ ಹೆಚ್ಚಾಗಿಯೇ ಕೇಳಿ ಬರುತ್ತಿದೆ. ಇದೀಗ ಇಂದು ಆಂಧ್ರದಲ್ಲಿ ಕಾಲ್ತುತವಾಗಿ 9 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ಕಾಲ್ತುಳಿತ ಪ್ರಕರಣದಲ್ಲಿ9 ಜನ ಸಾವನ್ನಪ್ಪಿದ್ದಾರೆ. ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗದಲ್ಲಿರುವ ಶ್ರೀವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದೆ. ಸಾವು ನೋವು ಕಂಡು ಬಂದಿದೆ. ಈಗಾಗಲೇ 9 ಜನ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಕಾರ್ತಿಕ ಮಾಸದ ಸಮಯದಲ್ಲಿ ಶ್ರೀಕಾಕುಳಂ ದೇವಸ್ಥಾನಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಏಕಾದಶಿಯ ಸಮಯ ಬೇರೆ. ಇದೇ ಕಾರಣಕ್ಕೆ ದೇವಾಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದರು. ಹೀಗಾಗಿ ಅಲ್ಲಿನ ಅಧಿಕಾರಿಗಳಿಗೆ ನಿಯಂತ್ರಿಸಲು ಕಷ್ಟವಾಗಿದೆ. ಇದರಿಂದ ಕಾಲ್ತುಳಿತ ಸಂಭವಿಸಿ, ಹಲವರು ಸಾವನ್ನಪ್ಪಿದ್ದಾರೆ. ಈ ಕಾಲ್ತುಳಿತದ ವಿಚಾರ ತಿಳಿದ ಮೇಲೆ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ದುಃಖ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ಕೂಡ ಘಟನಾ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಿ, ಶಾಂತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಜನರ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತ ಗತಿಯಲ್ಲಿ ನಡೆಸುವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇನ್ನು ಚಂದ್ರಬಾಬು ನಾಯ್ಡು ಸರ್ಕಾರ ದೇವಸ್ಥಾನಗಳಲ್ಲಿ ಸರಿಯಾದ ವ್ಯವಸ್ಥೆ ಮಾಡಿಲ್ಲದ ಕಾರಣ, ಈ ರೀತಿಯ ದುರಂತ ನಡೆಯುತ್ತಿದೆ ಎಂದು ಭಕ್ತರು ಬೇಸರ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದಲ್ಲಿ ಈ ಹಿಂದೆ ತಿರುಮಲದಲ್ಲಿ ಇದೇ ರೀತಿ ಕಾಲ್ತುಳಿತ ಉಂಟಾಗಿತ್ತು. ಆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂಬ ಬೇಸರ ಜನರಲ್ಲಿದೆ.

source https://suddione.com/9-people-died-in-a-stampede-in-andhra-pradesh-what-is-the-reason/


0 Comments
If u have any queries, Please let us know