ಐಪಿಎಲ್ ಡಬಲ್ ಹೆಡರ್: ಆರ್‌ಸಿಬಿ-ಡೆಲ್ಲಿ ಮುಖಾಮುಖಿ ಇಂದು

ಏಪ್ರಿಲ್ 18ರ ಶನಿವಾರ ಐಪಿಎಲ್‌ನಲ್ಲಿ ಡಬಲ್ ಹೆಡರ್ ಪಂದ್ಯಗಳು ನಡೆಯಲಿದ್ದು, ದಿನದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ RCB ತಂಡವು ಡೆಲ್ಲಿ ಕ್ಯಾಪಿಟಲ್ಸ್  ವಿರುದ್ಧ ಕಣಕ್ಕಿಳಿಯಲಿದೆ.

ಈ ಆವೃತ್ತಿಯಲ್ಲಿ ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ಉತ್ತಮ ಫಾರ್ಮ್‌ನಲ್ಲಿದ್ದು, ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಜಯ ಸಾಧಿಸಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಸೋಲು ಅನುಭವಿಸಿದೆ.

ಮತ್ತೊಂದೆಡೆ, ಆರಂಭದಲ್ಲಿ ಸತತ ಗೆಲುವುಗಳೊಂದಿಗೆ ಮಿಂಚಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇತ್ತೀಚಿನ ಎರಡು ಪಂದ್ಯಗಳಲ್ಲಿ ಸೋತು ಲಯ ಕಳೆದುಕೊಂಡಿದೆ. ಹೀಗಾಗಿ, ಡೆಲ್ಲಿ ಮತ್ತೆ ಗೆಲುವಿನ ಹಾದಿಗೆ ಮರಳಲು ಯತ್ನಿಸುತ್ತಿದ್ದರೆ, ಆರ್‌ಸಿಬಿ ತನ್ನ ಗೆಲುವಿನ ಸರಣಿಯನ್ನು ಮುಂದುವರಿಸಲು ಸಜ್ಜಾಗಿದೆ.

ಐಪಿಎಲ್ 2026ರ 26ನೇ ಪಂದ್ಯವಾಗಿರುವ ಈ ಮುಖಾಮುಖಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಲ್ಲಿ ನಡೆಯಲಿದೆ. ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದ್ದು, ಟಾಸ್ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.ಪ್ರೇಕ್ಷಕರು ಈ ಪಂದ್ಯವನ್ನು Star Sports ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಿ ವೀಕ್ಷಿಸಬಹುದು. ಜೊತೆಗೆ JioHotstar ಆಪ್ ಮೂಲಕ ಮೊಬೈಲ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಕೂಡ ಲಭ್ಯವಿದೆ.



source https://suddione.com/ipl-double-header-rcb-delhi-clash-today/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ