ತಮಿಳುನಾಡು ನೂತನ ಸಿಎಂ ವಿಜಯ್‌ ಗೆ ಸಿದ್ದರಾಮಯ್ಯ ಅಭಿನಂದನೆ: ವೈರಲ್ ಆಯ್ತು ವಿಡಿಯೋ ಕಾಲ್!

ಸುದ್ದಿಒನ್,ಬೆಂಗಳೂರು,ಮೇ.11: ತಮಿಳುನಾಡಿನ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ನಟ, ರಾಜಕಾರಣಿ ವಿಜಯ್ ದಳಪತಿ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಭಾನುವಾರ ಚೆನ್ನೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬೆನ್ನಲ್ಲೇ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.

ಸಿದ್ದರಾಮಯ್ಯ ಅವರು ವಿಜಯ್ ಅವರೊಂದಿಗೆ ಮಾತನಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ನಾನು ಸಿದ್ದರಾಮಯ್ಯ ಮಾತನಾಡುತ್ತಿದ್ದೇನೆ. ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ, ಇತಿಹಾಸ ಸೃಷ್ಟಿ ಮಾಡಿದ ನಿಮಗೆ ಅಭಿನಂದನೆಗಳು. ನೀವು ಬೆಂಗಳೂರಿಗೆ ಬಂದಾಗ ಖಂಡಿತ ಭೇಟಿಯಾಗೋಣ.ವಿಜಯ್ ಅವರಿಗೆ ಬೆಂಗಳೂರಿಗೆ ಬರುವಂತೆ ಸಿದ್ದರಾಮಯ್ಯ ಇದೇ ವೇಳೆ ಆತ್ಮೀಯ ಆಹ್ವಾನ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ

ದೂರವಾಣಿ ಕರೆಯ ಜೊತೆಗೆ, ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟ್ಟರ್) ಖಾತೆಯ ಮೂಲಕವೂ ಶುಭಕೋರಿದ್ದಾರೆ.ಸಿನಿಮಾ ಪ್ರಪಂಚದಿಂದ ಜನಸೇವೆಯತ್ತ ಗಮನಾರ್ಹ ಪ್ರಜಾಪ್ರಭುತ್ವ ಪ್ರಯಾಣ ಬೆಳೆಸುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಜೋಸೆಫ್ ವಿಜಯ್ ಅವರಿಗೆ ಅಭಿನಂದನೆಗಳು. ಕರ್ನಾಟಕ ಮತ್ತು ತಮಿಳುನಾಡು ನಡುವೆ ಅಭಿವೃದ್ಧಿ, ಸಾಂಸ್ಕೃತಿಕ ಬಾಂಧವ್ಯ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡೋಣ ಎಂದು ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ.



source https://suddione.com/siddaramaiah-congratulates-tamil-nadus-new-cm-vijay-video-call-goes-viral/

Post a Comment

0 Comments