
ಸುದ್ದಿಒನ್,ಬೆಂಗಳೂರು,ಮೇ.15: ದೇಶಾದ್ಯಂತ ಇಂಧನ ದರದಲ್ಲಿ ಮತ್ತೊಮ್ಮೆ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಸ್ಥಿರವಾಗಿದ್ದ ತೈಲ ಬೆಲೆಗಳು ಇಂದು ದಿಢೀರ್ ಏರಿಕೆ ಕಾಣುವ ಮೂಲಕ ಗ್ರಾಹಕರಿಗೆ ಶಾಕ್ ನೀಡಿವೆ.
ಪೆಟ್ರೋಲ್ ಮತ್ತು ಡೀಸೆಲ್ ಎರಡರ ಬೆಲೆಯಲ್ಲೂ ತಲಾ 3 ರೂಪಾಯಿಗಳಷ್ಟು ಏರಿಕೆ ಮಾಡಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ಇತರೆ ಆರ್ಥಿಕ ಕಾರಣಗಳಿಂದಾಗಿ ಈ ಬೆಲೆ ಏರಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ, ಇಂಧನ ದರ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಸಾರಿಗೆ ವೆಚ್ಚ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ತರಕಾರಿ ಮತ್ತು ಇತರ ದಿನಸಿ ಪದಾರ್ಥಗಳ ಬೆಲೆಯೂ ಏರಿಕೆಯಾಗುವ ಭೀತಿ ಎದುರಾಗಿದೆ.
Hike in fuel prices; Petrol prices rise from Rs 94.77 to Rs 97.77 per litre, while diesel prices increase from Rs 87.67 to Rs 90.67 per litre pic.twitter.com/sLk3rf6E42
— ANI (@ANI) May 15, 2026












source https://suddione.com/breaking-price-hike-hits-motorists-petrol-diesel-prices-hiked-by-rs-3-per-liter/

0 Comments
If u have any queries, Please let us know