BREAKING : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಪ್ರಮಾಣ ವಚನ ಸ್ವೀಕಾರ

ಸುದ್ದಿಒನ್,ತಿರುವನಂತಪುರಂ,ಮೇ.18: ಕೇರಳ ರಾಜಕಾರಣದ ತೀವ್ರ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದರು. ಇಲ್ಲಿನ ರಾಜಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಸತೀಶನ್ ಹಾಗೂ ಅವರೊಂದಿಗೆ 20 ಸಚಿವ ಸಂಪುಟ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನೂತನ ಸಚಿವರ ಪೈಕಿ 11 ಮಂದಿ ಕಾಂಗ್ರೆಸ್ ನಾಯಕರಾಗಿದ್ದಾರೆ.

ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ದೇಶದ ಪ್ರಮುಖ ರಾಜಕೀಯ ನಾಯಕರು ರಾಜಧಾನಿ ತಿರುವನಂತಪುರಂಗೆ ಆಗಮಿಸಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಶುಭ ಕೋರಿದರು.

ಎಡರಂಗ (LDF) ಸತತ ಎರಡು ಅವಧಿಗಳ ಕಾಲ ಆಡಳಿತ ನಡೆಸಿದ ನಂತರ, ಕಾಂಗ್ರೆಸ್ ಭರ್ಜರಿ ಪುನರಾಗಮನ ಮಾಡಲು ಸತೀಶನ್ ಅವರೇ ಮುಖ್ಯ ಸೂತ್ರಧಾರಿಯಾಗಿದ್ದರು. ಹೀಗಾಗಿ ಅವರು ಸಿಎಂ ಸ್ಥಾನಕ್ಕೆ ಜನರ ಮೊದಲ ಆಯ್ಕೆಯಾಗಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ದಶಕಗಳಿಂದ ದೆಹಲಿ ರಾಜಕಾರಣದಲ್ಲಿ ಸಕ್ರಿಯರಾಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಇಚ್ಛಿಸಿತ್ತು. ಶಾಸಕರು (MLAs) ಸಹ ಹೈಕಮಾಂಡ್ ಆಯ್ಕೆಯನ್ನೇ ಬೆಂಬಲಿಸಿದ್ದರು.



source https://suddione.com/breaking-v-d-satheesan-sworn-in-as-new-chief-minister-of-kerala/

Post a Comment

0 Comments