
ದೆಹಲಿ.ಜೂನ್.22: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (CBSE) 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಉತ್ತರ ಪತ್ರಿಕೆಗಳ ಪರಿಶೀಲನೆ ಮತ್ತು ಮರು ಮೌಲ್ಯಮಾಪನಕ್ಕೆ (Re-evaluation) ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳ ಫಲಿತಾಂಶವನ್ನು ಭಾನುವಾರ ಪ್ರಕಟಿಸಿದೆ.
ಈ ಕುರಿತು ಎಕ್ಸ್ (X) ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿಬಿಎಸ್ಇ, 12ನೇ ತರಗತಿಯ ಉತ್ತರ ಪತ್ರಿಕೆಗಳ ಪರಿಶೀಲನೆ ಹಾಗೂ ಮರು ಮೌಲ್ಯಮಾಪನದ ಫಲಿತಾಂಶಗಳ ಬಿಡುಗಡೆ ಪ್ರಕ್ರಿಯೆಯನ್ನು ಮಂಡಳಿಯು ಆರಂಭಿಸಿದೆ ಎಂದು ತಿಳಿಸಿದೆ.

ಫಲಿತಾಂಶಗಳನ್ನು ಹಂತಹಂತವಾಗಿ ಬಿಡುಗಡೆ ಮಾಡಲಾಗುತ್ತಿದ್ದು, ಸಲ್ಲಿಕೆಯಾಗಿದ್ದ ಒಟ್ಟು ಅರ್ಜಿಗಳ ಪೈಕಿ ಶೇಕಡಾ 87 ಕ್ಕೂ ಹೆಚ್ಚು ಅರ್ಜಿಗಳ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಉಳಿದ ಅರ್ಜಿಗಳ ಫಲಿತಾಂಶಗಳು ಶೀಘ್ರದಲ್ಲೇ ಲಭ್ಯವಾಗಲಿದ್ದು, ಇಡೀ ಪ್ರಕ್ರಿಯೆಯು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ” ಎಂದು ಮಂಡಳಿ ಸ್ಪಷ್ಟಪಡಿಸಿದೆ.
ಫಲಿತಾಂಶ ವೀಕ್ಷಿಸುವುದು ಹೇಗೆ?
ವಿದ್ಯಾರ್ಥಿಗಳು ತಮ್ಮ ಲಾಗಿನ್ ವಿವರಗಳನ್ನು (Login Credentials) ಬಳಸಿಕೊಂಡು ಸಿಬಿಎಸ್ಇಯ ಅಧಿಕೃತ ವೆಬ್ಸೈಟ್ನಲ್ಲಿ ಪರಿಷ್ಕೃತ ಅಂಕಗಳನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ತಮ್ಮ ಅರ್ಜಿಗಳ ಸ್ಥಿತಿಯನ್ನು results.digilocker.gov.in ವೆಬ್ಸೈಟ್ನಲ್ಲಿಯೂ ವೀಕ್ಷಿಸಬಹುದು ಎಂದು ಮಂಡಳಿ ತಿಳಿಸಿದೆ.
ಉನ್ನತ ಶಿಕ್ಷಣದ ಪ್ರವೇಶಾತಿ ಹಾಗೂ ಇತರ ಶೈಕ್ಷಣಿಕ ಕಾರಣಗಳಿಗಾಗಿ ಪರಿಷ್ಕೃತ ಅಂಕಗಳಿಗಾಗಿ ಕಾತುರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಈ ಫಲಿತಾಂಶ ಪ್ರಕಟಣೆಯು ನೆಮ್ಮದಿ ತಂದಿದೆ. ಬೋರ್ಡ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರ, ಅಂಕಗಳ ಪರಿಶೀಲನೆ, ಮೌಲ್ಯಮಾಪನ ಮಾಡಿದ ಉತ್ತರ ಪತ್ರಿಕೆಗಳ ನಕಲು ಪಡೆಯುವುದು ಮತ್ತು ಮರು ಮೌಲ್ಯಮಾಪನಕ್ಕೆ ಸಿಬಿಎಸ್ಇ ಅವಕಾಶ ಕಲ್ಪಿಸಿತ್ತು.







source https://suddione.com/cbse-class-12th-revaluation-results-declared/

0 Comments
If u have any queries, Please let us know