ವಿದ್ಯಾರ್ಥಿ ಪ್ರತಿಭಟನಾಕಾರರಿಗೆ ಸುಪ್ರೀಂಕೋರ್ಟ್ ರಿಲೀಫ್: ಅಪ್ರಾಪ್ತರು, ಕ್ರಿಮಿನಲ್ ಹಿನ್ನೆಲೆಯಿಲ್ಲದವರ ಬಿಡುಗಡೆಗೆ ಆದೇಶ!

ದೆಹಲಿ.ಜುಲೈ.28: ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೇಶಾದ್ಯಂತ ನಡೆದಿದ್ದ ಬೃಹತ್ ಪ್ರತಿಭಟನೆಗಳ ವೇಳೆ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ನಿರಾಳತೆ ನೀಡಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರು ಹಾಗೂ ಯಾವುದೇ ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಮಹತ್ವದ ಆದೇಶ ನೀಡಿದೆ.

ಪ್ರಶ್ನೆಪತ್ರಿಕೆ ಚೋರಿ/ಸೋರಿಕೆ ಪ್ರಕರಣವನ್ನು ವಿರೋಧಿಸಿ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಪೊಲೀಸರು ಹಲವು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದರು ಹಾಗೂ ಬಂಧಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಪೀಠ, ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲದ ಹಾಗೂ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳ ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಅವರನ್ನು ತಕ್ಷಣವೇ ಕಸ್ಟಡಿಯಿಂದ ಬಿಡುಗಡೆ ಮಾಡಬೇಕೆಂದು ನಿರ್ದೇಶಿಸಿದೆ.

 



source https://suddione.com/supreme-court-relief-for-student-protesters-orders-release-of-minors-those-without-criminal-background/

Post a Comment

0 Comments