ಈ ದಿನದ ಪ್ರಮುಖ 10 ಸುದ್ದಿಗಳು: ಭಾನುವಾರ, 16 ಆಗಸ್ಟ್ 2026

ಈ ದಿನದ ಪ್ರಮುಖ 10 ಸುದ್ದಿಗಳು: ಭಾನುವಾರ, 16 ಆಗಸ್ಟ್ 2026

ಈ ದಿನದ ಪ್ರಮುಖ 10 ಸುದ್ದಿಗಳು: ಭಾನುವಾರ, 16 ಆಗಸ್ಟ್ 2026

ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದ ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ..

ರಾಜ್ಯ ಬಿಜೆಪಿ ʼಶಸ್ತ್ರಚಿಕಿತ್ಸೆʼಗೆ ವರಿಷ್ಠರ ತಯಾರಿ

ನವದೆಹಲಿ: ನಾಯಕರ ನಡುವೆ ಸಮನ್ವಯದ ಕೊರತೆ, ಭಿನ್ನಮತದ ಬೇಗುದಿಯಿಂದ ನಲುಗಿರುವ ಕರ್ನಾಟಕ ಬಿಜೆಪಿಗೆ ‘ಶಸ್ತ್ರಚಿಕಿತ್ಸೆ’ ನಡೆಸಲು ‍ಪಕ್ಷದ ವರಿಷ್ಠರು ಕೊನೆಗೂ ಮನಸ್ಸು ಮಾಡಿದ್ದಾರೆ.

ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ

ಪಡಿತರದಾರರ ಇ–ಕೆವೈಸಿ: ಕಾಣದ ಪ್ರಗತಿ

ಬೆಳಗಾವಿ: ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಇ–ಕೆವೈಸಿ ಮಾಡುವ ಪ್ರಕ್ರಿಯೆ ಆರಂಭವಾಗಿ ತಿಂಗಳಾದರೂ ಶೇ 9.73ರಷ್ಟು ಮಾತ್ರ ಪ್ರಗತಿಯಾಗಿದೆ. 

ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ

ಕಾರ್ಯಕ್ರಮಕ್ಕೆ ಸಿಜೆಐಗೆ ಆಹ್ವಾನ: ವಿದ್ಯಾರ್ಥಿಗಳ ಆಕ್ಷೇಪ

ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯ (ಎನ್‌ಎಲ್‌ಎಸ್‌ಐಯು) 2026ನೇ ಸಾಲಿನ ಘಟಿಕೋತ್ಸವದ ಅತಿಥಿಯಾಗಿ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ (ಸಿಜೆಐ) ಅವರು ಭಾಗವಹಿಸುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ

ಸಕ್ಕರೆ ಕಾರ್ಖಾನೆ ಸ್ಥಾಪನೆಗೆ 42 ಅರ್ಜಿ

ಬೆಳಗಾವಿ: ಹೊಸದಾಗಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಅನುಮೋದನೆ ಕೋರಿ, ರಾಜ್ಯ ಸರ್ಕಾರಕ್ಕೆ ಒಟ್ಟು 42 ಅರ್ಜಿಗಳು ಸಲ್ಲಿಕೆಯಾಗಿವೆ. ಇಲ್ಲಿನ ಸಕ್ಕರೆ ಆಯುಕ್ತರ ಕಚೇರಿಯಲ್ಲಿ ಅರ್ಜಿಗಳ ಪರಿಶೀಲನಾ ಪ್ರಕ್ರಿಯೆ ನಡೆದಿದೆ.

ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ

‘ಯುವ–ನವ ಕರ್ನಾಟಕ’: ಡಿ.ಕೆ ಕನಸು

ಬೆಂಗಳೂರು: ಕೃಷಿಯಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಅಳವಡಿಕೆಗೆ ‘ರೈತ ಚೈತನ್ಯ’, ಶಾಲಾ ಮಕ್ಕಳಿಗೆ ‘ಎಐ ಅಕ್ಷರ ಅಭಿಯಾನ’, ಕೌಶಲಾಭಿವೃದ್ಧಿಗಾಗಿ ‘ಕೋಡಿಂಗ್‌ ಗುರುಕುಲ’ ಮತ್ತು 2047ರ ವೇಳೆಗೆ ₹320 ಲಕ್ಷ ಕೋಟಿ ಆರ್ಥಿಕತೆಯುಳ್ಳ ರಾಜ್ಯವಾಗಿ ಕರ್ನಾಟಕ... 

ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ

ಬೆಂಗಳೂರಲ್ಲಿ ಬಂಧಿತ ಅಸ್ಫುಲ್‌ ಉಗ್ರ ಸಂಘಟನೆಗೆ ಹಣ ವರ್ಗಾಯಿಸಿರುವುದು ಪತ್ತೆ

ಬೆಂಗಳೂರು: ದೇಶದ ವಿವಿಧ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಆರೋಪದಡಿ ನಗರದಲ್ಲಿ ಬಂಧನಕ್ಕೆ ಒಳಗಾಗಿರುವ ಅಸ್ಫುಲ್‌ ಮಲ್ಲಿಕ್‌ (25), ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ಒದಗಿಸಿರುವುದನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.

ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ

ಜಾರ್ಖಂಡ್‌ ವಿದ್ಯಾರ್ಥಿ ಪ್ರತಿಭಟನೆ: ಆ.20ರಂದು ಸಿಎಂ ನಿವಾಸಕ್ಕೆ ಮುತ್ತಿಗೆ ಘೋಷಣೆ

ರಾಂಚಿ: ಜಾರ್ಖಂಡ್‌ನ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶನಿವಾರ ‘ತಿರಂಗಾ ಯಾತ್ರೆ’ ನಡೆಸಿದ್ದು, ಮುಖ್ಯಮಂತ್ರಿ ಹೇಮಂತ್ ಸೊರೇನ್ ರಾಜೀನಾಮೆಗೆ ಆಗ್ರಹಿಸಿ ಆಗಸ್ಟ್ 20ರಂದು ಅವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಘೋಷಿಸಿದ್ದಾರೆ.


ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ

ಖರ್ಗೆಗೆ ಸೋನಿಯಾ ಕುರ್ಚಿ ಕೇಳಿದ್ದರು, ವಂದೇ ಮಾತರಂಗೆ ಆಕ್ಷೇಪಿಸಿಲ್ಲ: ಕಾಂಗ್ರೆಸ್

ನವದೆಹಲಿ: ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿಯವರು 'ವಂದೇ ಮಾತರಂ'ನ ಪೂರ್ಣ ಆವೃತ್ತಿಯನ್ನು ಹಾಡಲು ಆಕ್ಷೇಪ ವ್ಯಕ್ತಪಡಿಸಿದ್ಧಾರೆ ಎಂದು ಬಿಜೆಪಿ ಆರೋಪಿಸಿದೆ.

ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ

ಸೈಬರ್‌ ವಂಚನೆ: ತನಿಖಾ ಸಂಸ್ಥೆ ಬ್ಯಾಂಕ್‌ ಖಾತೆ ಸಂಪೂರ್ಣ ಸ್ಥಗಿತಗೊಳಿಸುವಂತಿಲ್ಲ!

ಲಖನೌ: ‘ಸೈಬರ್‌ ವಂಚನೆ ಪ್ರಕರಣಗಳಲ್ಲಿ, ತನಿಖೆಯ ಭಾಗವಾಗಿ ವ್ಯಕ್ತಿಯ ಬ್ಯಾಂಕ್‌ ಖಾತೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ತನಿಖಾ ಸಂಸ್ಥೆಗಳಿಗೆ ಅವಕಾಶವಿಲ್ಲ’ ಎಂದು ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠವು ತೀರ್ಪು ನೀಡಿದೆ.


ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ

ಹಾಕಿ: ಕರ್ನಾಟಕಕ್ಕೆ ನಿರಾಯಾಸ ಗೆಲುವು

ಪುಣೆ (ಪಿಟಿಐ): ಕರ್ನಾಟಕ, ಬಿಹಾರ ಮತ್ತು ಮಿಜೋರಾಂ ತಂಡಗಳು ಇಲ್ಲಿ ನಡೆಯುತ್ತಿರುವ 16ನೇ ಹಾಕಿ ಇಂಡಿಯಾ ಜೂನಿಯರ್‌ ಮಹಿಳಾ ರಾಷ್ಟ್ರೀಯ ಚಾಂಪಿಯನ್‌ಷಿಪ್‌ನ ತಮ್ಮ ತಮ್ಮ ಪಂದ್ಯಗಳಲ್ಲಿ ಗೆಲುವು ದಾಖಲಿಸಿದವು.

ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ