ಈ ದಿನದ ಪ್ರಮುಖ 10 ಸುದ್ದಿಗಳು: 2026ರ ಆಗಸ್ಟ್‌ 20, ಗುರುವಾರ

ಈ ದಿನದ ಪ್ರಮುಖ 10 ಸುದ್ದಿಗಳು: 2026ರ ಆಗಸ್ಟ್‌ 20, ಗುರುವಾರ

ಈ ದಿನದ ಪ್ರಮುಖ 10 ಸುದ್ದಿಗಳು: 2026ರ ಆಗಸ್ಟ್‌ 20, ಗುರುವಾರ

ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದ ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ..

ಸಂಪಾದಕೀಯ | ಪರಿಧಿ ಮೀರಿದ ‘ಬಿಸಿಐ’ ನಡವಳಿಕೆ: ವಿದ್ಯಾರ್ಥಿಗಳ ಮೌನಗೊಳಿಸುವ ಯತ್ನ

ನಲ್ಸಾರ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬಗೆಗಿನ ‘ಬಿಸಿಐ’ ವರ್ತನೆ ನಿರಂಕುಶ ಮನಃಸ್ಥಿತಿಯಿಂದ ಕೂಡಿತ್ತು ಹಾಗೂ ವಿದ್ಯಾರ್ಥಿಗಳ ನಾಗರಿಕ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನದಂತಿತ್ತು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಸಚಿವರಿಂದ ಸಂವಿಧಾನದ ಹೋಮ!: ಚಂದ್ರಕಾಂತ ವಡ್ಡು ಅವರ ವಿಶ್ಲೇಷಣೆ

ಹೊಸ ಸರ್ಕಾರ ಬಂದಾಗಲೆಲ್ಲ ಸಚಿವರ ಕಚೇರಿ ಮತ್ತು ನಿವಾಸಗಳ ನವೀಕರಣ ನಡೆಯುತ್ತದೆ. ಸಾರ್ವಜನಿಕರ ಹಣದಿಂದ ನಡೆಯುವ ಆ ಪ್ರಕ್ರಿಯೆ ಕಾನೂನುಬದ್ಧವಾಗಿ ಇದ್ದರೂ, ನೈತಿಕವಾಗಿ ಅದು ಸರಿ ಎಂದು ಹೇಳಲು ಸಾಧ್ಯವಿಲ್ಲ. ಅದರಲ್ಲೂ ಸರ್ಕಾರಿ ಕಟ್ಟಡಗಳಲ್ಲಿ ನಡೆಸುವ ಧಾರ್ಮಿಕ ಆಚರಣೆಗಳು ಸಂವಿಧಾನದ ಆಶಯಕ್ಕೆ ಚ್ಯುತಿ ಉಂಟು ಮಾಡುತ್ತವೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಕಲಾಪ ಕದಡಿದ ‘ನಾಗೇಂದ್ರ’: ಮೂರನೇ ದಿನವೂ ಬಿಜೆಪಿ ಹೋರಾಟ

ಬೆಂಗಳೂರು: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ–ಜೆಡಿಎಸ್‌ ಸದಸ್ಯರು ಉಭಯ ಸದನಗಳಲ್ಲೂ ಪಟ್ಟು ಬಿಗಿಗೊಳಿಸಿದ್ದರಿಂದ ಬುಧವಾರವೂ ಅರ್ಧದಿನದ ಕಲಾಪ ವ್ಯರ್ಥವಾಯಿತು. ಸದನವನ್ನು ಮುಂದೂಡಿದ ನಂತರವೂ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಬಹುರಾಷ್ಟ್ರೀಯ ಕಂಪನಿಗಳ ಲೇಬಲ್ ಅಂಟಿಸಿ ನಕಲಿ ಔಷಧ ಮಾರಾಟ: ಎಸ್‌ಐಟಿ ತನಿಖೆ

ಬೆಂಗಳೂರು: ‘ಬೆಂಗಳೂರು ದಕ್ಷಿಣ ತಾಲ್ಲೂಕಿನ ಸಿ.ಕೆ. ತಾಂಡ್ಯ ಗ್ರಾಮದ ಫಾರ್ಮ್‌ ಹೌಸ್‌ನಲ್ಲಿ ನಕಲಿ ಔಷಧ ಪತ್ತೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ನಿರ್ಧರಿಸಲಾಗಿದೆ’ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದರು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಪ್ರಜ್ವಲ್‌ ರೇವಣ್ಣಗೆ ಮೊಬೈಲ್‌: ಇನ್ನೂ ಇಬ್ಬರು ಅಮಾನತು

ಬೆಂಗಳೂರು: ಅತ್ಯಾಚಾರ ಪ್ರಕರಣದ ಅಪರಾಧಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಪ್ರಜ್ವಲ್‌ ರೇವಣ್ಣ ಮೊಬೈಲ್‌ ಬಳಸಿದ್ದ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಜೈಲರ್ ರಮೇಶ್ ಧರ್ಮಟ್ಟಿ ಹಾಗೂ ವಾರ್ಡರ್ ಮಹೇಶ್ ಸಜ್ಜನ್ ಅವರನ್ನು ಅಮಾನತು ಮಾಡಲಾಗಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್‌ಐಆರ್

ಬೆಂಗಳೂರು: ‘ಚುನಾವಣೆಯಲ್ಲಿ ಸ್ಪರ್ಧಿಸಿದ ವೇಳೆ ತಮ್ಮ ಆಸ್ತಿ ಮತ್ತು ಆದಾಯಕ್ಕೆ ಸಂಬಂಧಿಸಿದಂತೆ ನಿಖರ ಮಾಹಿತಿ ಒದಗಿಸಿಲ್ಲ’ ಎಂಬ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಶಾಸಕ ಬಿಜೆಪಿಯ ಪ್ರೀತಂ ಗೌಡ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿ ವರದಿ ಕೊಡಿ’ ಎಂದು ಹಾಸನ ಲೋಕಾಯುಕ್ತ ಎಸ್‌ಪಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಪಿಂಚಣಿ | ಆದಾಯ ಮಿತಿ ₹1.20 ಲಕ್ಷಕ್ಕೆ ಹೆಚ್ಚಳ: ಕಂದಾಯ ಇಲಾಖೆ ಆದೇಶ

ಬೆಂಗಳೂರು: ವಿವಿಧ ಸಾಮಾಜಿಕ ಭದ್ರತಾ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಉತ್ತರ ಕೊರಿಯಾದ ಬಳಿ 57 ಶಕ್ತಿಶಾಲಿ ಅಣ್ವಸ್ತ್ರಗಳಿವೆ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್: ಉತ್ತರ ಕೊರಿಯಾದ ನಾಯಕ ಕಿಮ್ ಜೊಂಗ್ ಉನ್ ಅವರನ್ನು ಭೇಟಿಯಾಗಲು ಯೋಜಿಸುತ್ತಿರುವುದಾಗಿ ತಿಳಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಆ ದೇಶವು 57 ಅತ್ಯಂತ ಶಕ್ತಿಶಾಲಿ ಅಣ್ವಸ್ತ್ರಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ತಮಿಳುನಾಡಿನ ಶಾಸಕರಿಗೆ ಸರ್ಕಾರಿ ಕಾರು, ವಿಮೆ ಮೊತ್ತ ಹೆಚ್ಚಳ ಸೇರಿ ಹಲವು ಕೊಡುಗೆ

ಚೆನ್ನೈ (ಪಿಟಿಐ): ತಮಿಳುನಾಡಿನ ಎಲ್ಲ ಶಾಸಕರಿಗೆ ಸರ್ಕಾರಿ ವಾಹನ, ವಿಮೆ ಮೊತ್ತ ಹೆಚ್ಚಳ ಸೇರಿದಂತೆ ಹಲವಾರು ‘ಕೊಡುಗೆ’ಗಳನ್ನು ಮುಖ್ಯಮಂತ್ರಿ ಜೋಸೆಫ್‌ ವಿಜಯ್ ಅವರು ಬುಧವಾರ ಘೋಷಿಸಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ವರಮಹಾಲಕ್ಷ್ಮಿ ಹಬ್ಬ: ಗಗನಕ್ಕೇರಿದ ಹಣ್ಣು, ಹೂವು, ತರಕಾರಿಗಳ ಬೆಲೆ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬವನ್ನು ಶುಕ್ರವಾರ ಸಡಗರದಿಂದ ಆಚರಿಸಲು ನಗರದ ಜನತೆ ಅಗತ್ಯ ಸಿದ್ಧತೆಯನ್ನು ಬುಧವಾರವೇ ನಡೆಸಿದರು. ಬೆಲೆ ಏರಿಕೆಯ ಬಿಸಿಯ ನಡುವೆ ಹೂ, ಹಣ್ಣು, ತರಕಾರಿ ಸೇರಿದಂತೆ ಹಬ್ಬದ ಪರಿಕರ ಖರೀದಿಸಿದರು. ಸಂಜೆ ಸುರಿಯುತ್ತಿದ್ದ ಮಳೆಯಲ್ಲಿಯೇ ವಹಿವಾಟು ನಡೆಸಿದರು.

ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ