ಕರ್ನಾಟಕದಲ್ಲಿ 11 ಎಸ್‌ಇಜೆಡ್‌ಗಳು ನಿಷ್ಕ್ರಿಯ: ಸಚಿವ ಜಿತಿನ್ ಪ್ರಸಾದ
ನವದೆಹಲಿ: ಕರ್ನಾಟಕದಲ್ಲಿ 11 ವಿಶೇಷ ಆರ್ಥಿಕ ವಲಯಗಳು (ಎಸ್‌ಇಜೆಡ್) ಕಾರ್ಯಾಚರಣೆ ನಡೆಸುತ್ತಿಲ್ಲ ಎಂದು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕೆ ಖಾತೆ ರಾಜ್ಯ ಸಚಿವ ಜಿತಿನ್ ಪ್ರಸಾದ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಪ್ರಶ್ನೆಯೊಂದಕ್ಕೆ ಮಂಗಳವಾರ ಲಿಖಿತ ಉತ್ತರ ನೀಡಿದ ಅವರು, ರಾಜ್ಯದಲ್ಲಿ 60 ಎಸ್‌ಇಜೆಡ್‌ಗಳ ಸ್ಥಾಪನೆಗೆ ಮಂಜೂರಾತಿ ನೀಡಲಾಗಿತ್ತು. ಈ ಪೈಕಿ, 49 ಎಸ್‌ಇಜೆಡ್‌ಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, 38 ಕಾರ್ಯಾಚರಣೆ ನಡೆಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.
ದೇಶದಲ್ಲಿ 436 ಎಸ್‌ಇಜೆಡ್‌ಗಳ ಸ್ಥಾಪನೆಗೆ ಮಂಜೂರಾತಿ ನೀಡಲಾಗಿತ್ತು. 277 ವಿಶೇಷ ಆರ್ಥಿಕ ವಲಯಗಳಷ್ಟೇ ಕಾರ್ಯಾಚರಣೆ ನಡೆಸುತ್ತಿವೆ. ರಾಜ್ಯ ಸರ್ಕಾರಗಳಿಂದ ಅನುಮೋದನೆ ವಿಳಂಬ, ಪ್ರತಿಕೂಲ ವ್ಯವಹಾರ ವಾತಾವರಣ, ಹಣಕಾಸಿನ ಪ್ರೋತ್ಸಾಹದಲ್ಲಿನ ಬದಲಾವಣೆ ಮತ್ತಿತರ ಕಾರಣಗಳಿಂದ ಎಸ್‌ಇಜೆಡ್‌ಗಳ ಆರಂಭ ತಡವಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260812-51-1231994021