‘ಸಿರಿವೈಭವ’ಅಧ್ಯಕ್ಷೆ ನಾಗವಲ್ಲಿಗೆ ಸೇರಿದ ₹18.32ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

‘ಸಿರಿವೈಭವ’ಅಧ್ಯಕ್ಷೆ ನಾಗವಲ್ಲಿಗೆ ಸೇರಿದ ₹18.32ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

‘ಸಿರಿವೈಭವ’ಅಧ್ಯಕ್ಷೆ ನಾಗವಲ್ಲಿಗೆ ಸೇರಿದ ₹18.32ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು:ಠೇವಣಿದಾರರ ₹65 ಕೋಟಿಯನ್ನು ವಂಚಿಸಿದ ಪ್ರಕರಣದಲ್ಲಿ ಸಿರಿವೈಭವ ಸೌಹಾರ್ದ ಪತ್ತಿನ ಸಹಕಾರ ಸೊಸೈಟಿಯ ಅಧ್ಯಕ್ಷೆ ಬಿ.ಎಸ್. ನಾಗವಲ್ಲಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಆರ್‌. ರಾಜೇಶ್‌ ದಂಪತಿಗೆ ಸೇರಿದ ₹18.32 ಕೋಟಿ ಮೊತ್ತದ ಸ್ವತ್ತುಗಳನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.

ನಾಗವಲ್ಲಿ ಮತ್ತು ರಾಜೇಶ್‌ ಅವರು ಹಲವು ಕಂಪನಿಗಳನ್ನು ಹೊಂದಿದ್ದು, ಯಾವುದೇ ಭದ್ರತೆ ಪಡೆಯದೆ ಸೊಸೈಟಿಯಿಂದ ಆ ಕಂಪನಿಗಳಿಗೆ ಸಾಲ ಮಂಜೂರು ಮಾಡಿದ್ದರು. ಸದಸ್ಯರ ಠೇವಣಿ ಮತ್ತು ಷೇರು ಮೊತ್ತವನ್ನು ದುರುಪಯೋಗ ಮಾಡಿಕೊಂಡಿದ್ದರು ಎಂದು ಇ.ಡಿ ತಿಳಿಸಿದೆ.

ಅವರ ಕಂಪನಿಗಳು ಸಾಲ ಮರುಪಾವತಿ ಮಾಡಿರಲಿಲ್ಲ. ಭದ್ರತೆ ಇಲ್ಲದ ಕಾರಣ, ಆ ಕಂಪನಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲು ಆಗಿರಲಿಲ್ಲ. ಈ ಕಾರಣದಿಂದಾಗಿ ಸೊಸೈಟಿಗೆ ಅಸಲು ಮತ್ತು ಬಡ್ಡಿ ಸೇರಿ ಒಟ್ಟು ₹65 ಕೋಟಿ ನಷ್ಟವಾಗಿತ್ತು. ಈ ಬಗ್ಗೆ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರ ನಿಗಮದ ವ್ಯವಸ್ಥಾಪಕ ನಿರ್ದೇಶಕರು ನೀಡಿದ್ದ ದೂರಿನ ಆಧಾರದಲ್ಲಿ ಸುಬ್ರಹ್ಮಣ್ಯಪುರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಅದರ ಆಧಾರದಲ್ಲಿ ಇ.ಡಿ ತನಿಖೆ ಆರಂಭಿಸಿತ್ತು.

ಜನವರಿಯಲ್ಲಿ ಪ್ರಕರಣ ದಾಖಲಿಸಿ ಕೊಂಡಿದ್ದ ಇ.ಡಿ, ಇದೇ ಮಾರ್ಚ್‌ನಲ್ಲಿ ₹17 ಕೋಟಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗಿನ ₹18.32 ಕೋಟಿಯೂ ಸೇರಿ ಒಟ್ಟು ₹35.32 ಕೋಟಿಯಷ್ಟು ಆಸ್ತಿ ಮುಟ್ಟುಗೋಲು ಹಾಕಿಕೊಂಡಂತಾಗಿದೆ.

‘ಆರೋಪಿಗಳು ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದರು ಎಂಬುದು ತನಿಖೆ ವೇಳೆ ಗೊತ್ತಾಯಿತು. ಈ ಅಕ್ರಮ ಗಳಿಕೆಯಿಂದ ಅವರು ಖರೀದಿಸಿದ್ದ 16 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದೇವೆ. ಬೆಂಗಳೂರು, ರಾಮನಗರ ಮತ್ತು ಮೈಸೂರಿನಲ್ಲಿನ ನಿವೇಶನ, ಕಟ್ಟಡ ಮತ್ತು ಕೃಷಿ ಜಮೀನು ಇದರಲ್ಲಿ ಸೇರಿವೆ’ ಎಂದು ಇ.ಡಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260822-4-2064491178

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ