ಸೆ.18ಕ್ಕೆ ಬರ್ತಾರೆ ‘ಅನಿರೀಕ್ಷಿತ ಅತಿಥಿಗಳು’

ಸೆ.18ಕ್ಕೆ ಬರ್ತಾರೆ ‘ಅನಿರೀಕ್ಷಿತ ಅತಿಥಿಗಳು’

ಸೆ.18ಕ್ಕೆ ಬರ್ತಾರೆ ‘ಅನಿರೀಕ್ಷಿತ ಅತಿಥಿಗಳು’

ಮನೋಜ್‌ ಅಣ್ಣಯ್ಯ ನಿರ್ದೇಶಿಸಿರುವ, ಬಿ.ವಿನೋದ್‌ ಕುಮಾರ್‌ ನಿರ್ಮಾಣದ ‘ಅನಿರೀಕ್ಷಿತ ಅತಿಥಿಗಳು’ ಸಿನಿಮಾ ಸೆ.18ರಂದು ತೆರೆಕಾಣಲಿದೆ.

ಇತ್ತೀಚೆಗೆ ಈ ಸಿನಿಮಾದ ಹಾಡುಗಳು ಬಿಡುಗಡೆಗೊಂಡವು. ಆರು ಪ್ರಮುಖ ಪಾತ್ರಗಳನ್ನು ಕೇಂದ್ರವಾಗಿಸಿಕೊಂಡು ಚಿತ್ರೀಕರಿಸಲ್ಪಟ್ಟಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಸ್ವಾಮಿನಾಥನ್ ಆರ್.ಕೆ ಸಂಗೀತ ನೀಡಿದ್ದಾರೆ.

ಇದು ಒಂದು ದಿನದಲ್ಲಿ ಅತಿಥಿಗೃಹವೊಂದರಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದ್ದು, ಕ್ರೈಮ್ ಥ್ರಿಲ್ಲರ್ ಜಾನರ್‌ನಲ್ಲಿದೆ. ನಾಯಕನಾಗಿ ‘ಮೈತ್ರಿ’ ಸಿನಿಮಾದಲ್ಲಿ ನಟಿಸಿದ್ದ ‘ಜಗ್ಗಿ’ ನಟಿಸಿದ್ದು, ಸಂಪ್ರತಿ ಆಳ್ವ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ. ಕಿರುಚಿತ್ರಗಳನ್ನು ನಿರ್ದೇಶಿಸಿರುವ, ಧಾರಾವಾಹಿಗಳಲ್ಲಿ ನಟಿಸಿರುವ ಮನೋಜ್‌ ಅವರಿಗೆ ಇದು ಚೊಚ್ಚಲ ಸಿನಿಮಾ. ಬೇಲೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆದಿದ್ದು, ಶ್ರೀರಾಮ್‌ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260822-51-1249690442

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ