ಹಾಸನ: 2028ರ ಚುನಾವಣೆಗೆ ದಾಳ ಉರುಳಿಸಿದರೇ ಕುಮಾರಸ್ವಾಮಿ?

ಹಾಸನ: 2028ರ ಚುನಾವಣೆಗೆ ದಾಳ ಉರುಳಿಸಿದರೇ ಕುಮಾರಸ್ವಾಮಿ?

ಹಾಸನ: 2028ರ ಚುನಾವಣೆಗೆ ದಾಳ ಉರುಳಿಸಿದರೇ ಕುಮಾರಸ್ವಾಮಿ?

ಹಾಸನ: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಉರುಳಿಸಿರುವ ದಾಳ ಇದೀಗ ಜಿಲ್ಲೆಯ ಕಾಂಗ್ರೆಸ್‌ ವಲಯದಲ್ಲಿ ತಳಮಳಕ್ಕೆ ಕಾರಣವಾಗಿದೆ. ಅಸಮಾಧಾನಿತರು, ನೋವು ಅನುಭವಿಸುತ್ತಿರುವವರಿಗೆ ಜೆಡಿಎಸ್‌ ಬಾಗಿಲು ತೆರೆದಿದೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ, ಕಾಂಗ್ರೆಸ್‌ನ ಮುಖಂಡರಿಗೆ ಗಾಳ ಹಾಕಿದ್ದಾರೆ ಎನ್ನುವ ವಿಶ್ಲೇಷಣೆಗಳು ಜಿಲ್ಲೆಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ಕಾಂಗ್ರೆಸ್‌ ಜಿಲ್ಲಾ ಘಟಕದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಈಗಾಗಲೇ ಬಹಿರಂಗವಾಗಿದೆ. ಅತೃಪ್ತ ಮುಖಂಡರು, ಪ್ರತ್ಯೇಕ ಸಭೆ ನಡೆಸಿ, ಅಸಮಾಧಾನ ಹೊರಹಾಕಿರುವುದು ಗುಟ್ಟಾಗಿ ಉಳಿದಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಸೋತಿರುವ ಅಭ್ಯರ್ಥಿಗಳಿಗೇ ಕಾಂಗ್ರೆಸ್‌ ವರಿಷ್ಠರು ಮಣೆ ಹಾಕುತ್ತಿದ್ದಾರೆ ಎನ್ನುವ ಅತೃಪ್ತಿ ಜಿಲ್ಲೆಯ ಹಿರಿಯ ಕಾಂಗ್ರೆಸ್ಸಿಗರಲ್ಲಿದೆ.

ಅದಕ್ಕೆ ಪುಷ್ಠಿ ನೀಡುವಂತೆ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರನ್ನಾಗಿ ಸೋತ ಅಭ್ಯರ್ಥಿಗಳನ್ನೇ ಬಹುತೇಕ ಕಡೆಗಳಲ್ಲಿ ನೇಮಕಾತಿ ಮಾಡಲಾಗಿದೆ. ಜೊತೆಗೆ ಮುಖ್ಯಮಂತ್ರಿ, ಸಚಿವರು ಸೇರಿದಂತೆ ಕಾಂಗ್ರೆಸ್‌ ರಾಜ್ಯ ನಾಯಕರು ಬಂದಾಗ, ಇದೇ ಅಭ್ಯರ್ಥಿಗಳು ಎಲ್ಲೆಡೆ ಕಾಣಿಸಿಕೊಳ್ಳುತ್ತಿರುವುದೂ ಹಿರಿಯ ಕಾಂಗ್ರೆಸ್ಸಿಗರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಮಧ್ಯೆ ಜೆಡಿಎಸ್‌ ತೊರೆದು, ಕಾಂಗ್ರೆಸ್‌ ಸೇರಿರುವ ಕೆ.ಎಂ. ಶಿವಲಿಂಗೇಗೌಡರಿಗೆ ಈಗ ಸಚಿವ ಸ್ಥಾನ ದೊರೆತಿದೆ. ಜಿಲ್ಲೆಯ ಏಕೈಕ ಕಾಂಗ್ರೆಸ್‌ ಶಾಸಕರಾಗಿದ್ದರೂ, ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಆದರೆ, ಹಲವು ವರ್ಷಗಳಿಂದ ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠೆಯಿಂದ ದುಡಿಯುತ್ತಿರುವವರಿಗೆ ಯಾವುದೇ ಸ್ಥಾನಮಾನ ಸಿಗುತ್ತಿಲ್ಲ ಎನ್ನುವ ಅತೃಪ್ತಿ ಕೆಲ ಕಾಂಗ್ರೆಸ್ ಮುಖಂಡರಲ್ಲಿದೆ. ‌

ಜೆಡಿಎಸ್‌ನಿಂದ ಮುನಿಸಿಕೊಂಡು ಕಾಂಗ್ರೆಸ್‌ಗೆ ಹೋಗಿರುವ ಶಿವಲಿಂಗೇಗೌಡರು ಸಚಿವರಾಗುತ್ತಿದ್ದಂತೆಯೇ ಎಚ್.ಡಿ. ಕುಮಾರಸ್ವಾಮಿ ಇದೀಗ ತಮ್ಮ ದಾಳವನ್ನು ಉರುಳಿಸಿರುವುದು ಬಹುತೇಕ ಕಾಂಗ್ರೆಸ್‌ ನಾಯಕರಲ್ಲಿ ತಳಮಳಕ್ಕೆ ಕಾರಣವಾಗಿದೆ. ಮೂರು ಬಾರಿ ಜೆಡಿಎಸ್‌ನಿಂದ ಗೆದ್ದಿದ್ದ ಶಿವಲಿಂಗೇಗೌಡರು, ತಮ್ಮ ಮತ ಬ್ಯಾಂಕ್‌ ಭದ್ರಪಡಿಸಿಕೊಳ್ಳಲು ಪಕ್ಷವನ್ನು ಉಪಯೋಗಿಸಿಕೊಂಡಿದ್ದಾರೆ. ಇದೀಗ ಅಧಿಕಾರದ ಆಸೆಗೆ ಕಾಂಗ್ರೆಸ್‌ ಸೇರಿದ್ದಾರೆ ಎನ್ನುವ ಆಪಾದನೆಗಳು ಜೆಡಿಎಸ್‌ ನಾಯಕರಿಂದ ಕೇಳಿ ಬರುತ್ತಿವೆ. ಇಂತಹ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ಹೇಳಿಕೆ, ಪರೋಕ್ಷವಾಗಿ ಶಿವಲಿಂಗೇಗೌಡರಿಗೆ ಸವಾಲು ಎಸೆಯುವಂತಿದೆ ಎನ್ನುತ್ತಾರೆ ಜಿಲ್ಲೆಯ ರಾಜಕೀಯ ಮುಖಂಡರು.

2028ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಎಚ್‌ಡಿಕೆ ಜಿಲ್ಲೆಯ ಅತೃಪ್ತ ಕಾಂಗ್ರೆಸ್‌ ಮುಖಂಡರನ್ನು ಸೆಳೆಯುವ ಸಿದ್ಧತೆ ಆರಂಭಿಸಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮತ್ತೆ ಜೆಡಿಎಸ್‌ ವೈಭವ ಮರಳುವಂತೆ ಮಾಡುವ ಆಲೋಚನೆಯಲ್ಲಿದ್ದಾರೆ. ಅದಕ್ಕಾಗಿಯೇ ನೋವು ಅನುಭವಿಸುತ್ತಿರುವವರಿಗೆ ಜೆಡಿಎಸ್ ಪಕ್ಷದಲ್ಲಿ ನೆರವು ಸಿಗಲಿದೆ ಎನ್ನುವ ಮಾತನ್ನು ಕುಮಾರಸ್ವಾಮಿ ಹೇಳಿದ್ದಾರೆ ಎನ್ನುವ ಮಾತುಗಳೂ ಕೇಳಿ ಬರುತ್ತಿವೆ.

ಕಾಂಗ್ರೆಸ್‌ನಲ್ಲಿ ಅಸಮಾಧಾನ ಇಲ್ಲ: ಶ್ರೇಯಸ್‌

ಕಾಂಗ್ರೆಸ್‌ನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಬಲಿಷ್ಠವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸದ ಶ್ರೇಯಸ್‌ ಪಟೇಲ್ ಹೇಳಿದ್ದಾರೆ.

‘ಎಲ್ಲ ಸಮಾಜಗಳಿಗೂ ಸಚಿವ ಸ್ಥಾನ ಕಲ್ಪಿಸುವ ಕೆಲಸವನ್ನು ಪಕ್ಷ ಮಾಡಿದೆ. ನಮ್ಮ ಜಿಲ್ಲೆಯನ್ನು ಗುರುತಿಸಿ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಿರುವುದು ನನಗೆ ಸಂತೋಷ ಹಾಗೂ ತೃಪ್ತಿ ತಂದಿದೆ’ ಎಂದರು.

ಮೂರು ವರ್ಷಗಳಿಂದ ಯಾವುದೇ ಸಮಸ್ಯೆ ಇಲ್ಲದೇ ಸರ್ಕಾರ ಸಾಗುತ್ತಿದೆ. ಸರ್ಕಾರದ ಬಗ್ಗೆ ಅನುಮಾನ ಪಡುವ ಅಗತ್ಯವಿಲ್ಲ. ವಿರೋಧ ಪಕ್ಷದಲ್ಲಿರುವವರು ಹೇಳಿಕೆ ನೀಡುವುದು ಸಹಜ. ಅದಕ್ಕೆಲ್ಲ ಉತ್ತರ ನೀಡುವ ಅವಶ್ಯಕತೆ ಇಲ್ಲ. ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಕಂಡು ಅಸೂಯೆಪಡುವವರು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ