
ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಅಪಘಾತ: ಇಬ್ಬರು ಸಾವು, 20 ಮಂದಿಗೆ ಗಾಯ
ಮಂಡ್ಯ: ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮಂಗಳೂರು–ಬೆಂಗಳೂರು ಹೆದ್ದಾರಿಯ ನೆಲ್ಲಿಗೆರೆ ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ಅಪಘಾತಕ್ಕೀಡಾಗಿ ಇಬ್ಬರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿ ಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಾಳುಗಳ ಚಿಕಿತ್ಸೆಗೆ ಜಿಲ್ಲಾಡಳಿತದಿಂದ ಅಗತ್ಯ ನೆರವು ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ ತಿಳಿಸಿದ್ದಾರೆ.