ಆ. 21ರಿಂದ ಬುಕ್ ಬ್ರಹ್ಮ ಸಾಹಿತ್ಯ ಉತ್ಸವ: ಸೇಂಟ್ ಜಾನ್ಸ್ ಸಭಾಂಗಣದಲ್ಲಿ ಆಯೋಜನೆ

ಆ. 21ರಿಂದ ಬುಕ್ ಬ್ರಹ್ಮ ಸಾಹಿತ್ಯ ಉತ್ಸವ: ಸೇಂಟ್ ಜಾನ್ಸ್ ಸಭಾಂಗಣದಲ್ಲಿ ಆಯೋಜನೆ

ಆ. 21ರಿಂದ ಬುಕ್ ಬ್ರಹ್ಮ ಸಾಹಿತ್ಯ ಉತ್ಸವ: ಸೇಂಟ್ ಜಾನ್ಸ್ ಸಭಾಂಗಣದಲ್ಲಿ ಆಯೋಜನೆ

ಬೆಂಗಳೂರು: ಬುಕ್ ಬ್ರಹ್ಮ ಸಂಸ್ಥೆಯು ಕೋರಮಂಗಲದ ಸೇಂಟ್ ಜಾನ್ಸ್ ಸಭಾಂಗಣ ದಲ್ಲಿ ಇದೇ 21ರಿಂದ 23ರವರೆಗೆ ‘ಬುಕ್ ಬ್ರಹ್ಮ ಸಾಹಿತ್ಯ ಉತ್ಸವ’ ಹಮ್ಮಿಕೊಂಡಿದೆ.

ಮೂರು ದಿನಗಳ ಈ ಉತ್ಸವದಲ್ಲಿ ದೇಶದ ವಿವಿಧ ಭಾಗಗಳ ಸಾಹಿತಿಗಳು, ಚಿಂತಕರು, ಪತ್ರಕರ್ತರು, ಕಲಾವಿದರು, ಪ್ರಕಾಶಕರು ಹಾಗೂ ಸಾಹಿತ್ಯಾಸಕ್ತರು ಭಾಗವಹಿಸಲಿದ್ದಾರೆ. ಒಂಬತ್ತು ವೇದಿಕೆಗಳಲ್ಲಿ ನೂರಾರು ಸಾಹಿತ್ಯಿಕ ಹಾಗೂ ಚಿಂತನಾತ್ಮಕ ಗೋಷ್ಠಿಗಳು ನಡೆಯಲಿವೆ.

ಈ ಸಂಭ್ರಮದಲ್ಲಿ ರಮೇಶ್ ಅರವಿಂದ್, ಪೂಜಾ ಗಾಂಧಿ, ಅನಿತಾ ಅಗ್ನಿಹೋತ್ರಿ, ಅರುಣವ ಸಿಂಹ, ಬೆನ್ಯಾಮಿನ್, ಪೆರುಮಾಳ್ ಮುರುಗನ್, ಸಲ್ಮಾ, ಇಮಯಂ, ವಿನೋದ್ ಚೌಧರಿ, ರಶೀದ್ ಕಿದ್ವಾಯಿ, ದರ್ಶನ್ ಪುಟ್ಟಣ್ಣಯ್ಯ, ಟಿ.ಎಂ. ಕೃಷ್ಣ, ಪಾಲ್ ಝಕರಿಯಾ, ಕೆ.ಆರ್. ಮೀರಾ, ವಸುಧೇಂದ್ರ, ಮಲ್ಲಿಕಾ ಪ್ರಸಾದ್, ಹರೀಶ್ ಭಟ್, ಟಿ.ಎನ್. ಸೀತಾರಾಮ್, ಗಿರೀಶ್ ಕಾಸರವಳ್ಳಿ ಸೇರಿದಂತೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

ಸಾಹಿತ್ಯ ಚರ್ಚೆಗಳ ಜತೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆಯಲಿವೆ. ರಾಮವ್ವ ಜೋಗತಿ, ಶಿಲ್ಪಾ ಮುಡ್ಬಿ, ‘ಪರಮಪದ’ ತಂಡ, ಸುನಿಧಿ ಗಣೇಶ್, ಉಸ್ತಾದ್ ರಫೀಕ್ ಖಾನ್, ಉಸ್ತಾದ್ ಶಫೀಕ್ ಖಾನ್, ಟಿ.ಎಸ್. ಸತ್ಯವತಿ, ಅಕ್ಷತಾ ಪಾಂಡವಪುರ ಮೊದಲಾದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಪಟ್ಲ ಸತೀಶ್ ಶೆಟ್ಟಿ ಅವರ ಪಾವಂಜೆ ಮೇಳ ದಿಂದ ‘ಭಸ್ಮಾಸುರ ಮೋಹಿನಿ’ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಉತ್ಸವದಲ್ಲಿ ‘ಬುಕ್‌ ಬ್ರಹ್ಮ–ಬುಕ್ ವರ್ಮ ಫಿಕ್ಷನ್ ಆಫ್‌ ದಿ ಇಯರ್’ ಪ್ರಶಸ್ತಿ, ‘ಬುಕ್ ಬ್ರಹ್ಮ ಸಾಹಿತ್ಯ ಪುರಸ್ಕಾರ’ ಪ್ರದಾನ ಮಾಡಲಾಗುತ್ತದೆ. ಬುಕ್ ಬ್ರಹ್ಮ ಕಾದಂಬರಿ ಪುರಸ್ಕಾರ ಮತ್ತು ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾಸ್ಪರ್ಧೆಯ ಫಲಿತಾಂಶಗಳನ್ನು ಇದೇ ಸಮಾರಂಭದಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260809-4-1350017248

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ